Girl in a jacket

Daily Archives: July 24, 2025

ಆಂಧ್ರಪ್ರದೇಶದಲ್ಲಿ ಬೆಂಗಳೂರು ಮೂಲದ ಬಿಜೆಪಿ ಮುಖಂಡರ ಬರ್ಭರ ಹತ್ಯೆ

ಬೆಂಗಳೂರು ,ಜು,23-ಬಿಜೆಪಿ ಮುಖಂಡರಾದ ತಂದೆ- ಮಗನನ್ನು ಅಪಹರಿಸಿ ಕತ್ತು ಸೀಳಿ ಆಂದ್ರಪ್ರದೇಶದ  ಬಾಪಟ್ಲ ಜಿಲ್ಲೆಯಲ್ಲಿ ನಡೆದಿದೆ. ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಕೇಸಿಗೆ ತೆರಳಿದ್ದ ತಂದೆ ವೀರಸ್ವಾಮಿರೆಡ್ಡಿ ಹಾಗೂ ಅವರ ಪುತ್ರ ಪ್ರಶಾಂತ್ ರೆಡ್ಡಿಯನ್ನು ಅಪಹರಿಸಿದ ದುಷ್ಕರ್ಮಿಗಳು ಇಬ್ಬರ ಕತ್ತು ಸೀಳಿ ಬರ್ಬರವಾಗಿ ಹತ್ಯೆಯಾದ ಘಟನೆ ನಡೆದಿದೆ. ಕೊಲೆಯಾದ ತಂದೆ ಮಕ್ಕಳು ಬಿಜೆಪಿ ಮಾಜಿ ಸಚಿವ ಅರವಿಂದ ಲಿಂಬಾವಳಿ ಆಪ್ತರಾಗಿದ್ದರು. ವೀರಸ್ವಾಮಿ ರೆಡ್ಡಿ ಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದು ಪ್ರಶಾಂತ್ ರೆಡ್ಡಿ ಮಹದೇವಪುರ…

ಉಪರಾಷ್ಟ್ರಪತಿ ರೇಸ್‌ನಲ್ಲಿರುವ ಪ್ರಮುಖ ಹೆಸರು ಹರಿವಂಶ್ ನಾರಾಯಣ್

ನವದೆಹಲಿ,ಜು,೨೪-ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಕಾರಣ ಆ ಸ್ಥಾನಕ್ಕೆ ಯಾರು ಎನ್ನುವ ಕುತೂಹಲಗಳು ಇವೆ ಈ ಮಧ್ಯೆ ರಾಜ್ಯಸಭಾ ಉಪಾಧ್ಯಕ್ಷ ಹರಿವಂಶ್ ನಾರಾಯಣ್ ಸಿಂಗ್ ಹೆಸರು ಪ್ರಮುಖವಾಗಿ ಕೇಳಿಬರುತ್ತಿದೆ. ಹೌದು.. ಹರಿವಂಶ್ ನಾರಾಯಣ್ ಸಿಂಗ್ ಅವರು ರಾಷ್ಟ್ರಪತಿ ದ್ರೌಪತಿ ಮುರ್ಮ ಅವರನ್ನು ಭೇಟಿ ಮಾಡಿ ಬಂದಿರುವುದೇ ಇದಕ್ಕೆ ಪ್ರಮುಖ ಕಾರಣವಾಗಿದ್ದು ಬಹುತೇಕ ಇವರನ್ನು ಉಪರಾಷ್ಟ್ರಪತಿಯನ್ನಾಗಿ ನೇಮಕ ಮಾಡುವ ಸಾದ್ಯತೆಳು ಹೆಚ್ಚಾಗಿವೆ ಎನ್ನುತ್ತವೆ ಮೂಲಗಳು ಬಿಹಾರ ಮೂಲದ ಹರಿವಂಶ್‌ಗೆ ಅಪಾರ ರಾಜಕೀಯ ಅನುಭವವಿದೆ.…

ಅಕ್ರಮ ಹಣ ವರ್ಗಾವಣೆ ಪ್ರಕರಣ-ರಿಲಿಯನ್ಸ್ ಗ್ರೂಪ್ ಮೇಲೆ ಇಡಿ ದಾಳಿ

ನವದೆಹಲಿ,ಜು,೨೪-ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಬಂಧಿಸಿದಂತೆ ಜಾರಿ ನಿರ್ದೆಶನಾಲಯ(ಇಡಿ) ದೆಹಲಿ ಮತ್ತು ಮುಂಬೈನಲ್ಲಿರುವ ರಿಲಯನ್ಸ್‌ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ನಡೆ ನಡೆಸಲಾಗಿದೆ. ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿದ್ದ ಎರಡು ಎಪ್‌ಐಆರ್ ಪ್ರಕರಣಕ್ಕೆ ಕುರಿತಂತೆ ಈ ದಾಳಿ ನಡೆಸಲಾಗಿದೆ ಎನ್ನುವ ಮಾಹಿತಿಗಳು ಲಭ್ಯವಾಗಿವೆ ಕಾರ್ಯಾಚರಣೆಯ ಭಾಗವಾಗಿ, ಇಡಿ ಅಧಿಕಾರಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ೫೦ ಕ್ಕೂ ಹೆಚ್ಚು ಅನಿಲ್ ಅಂಬಾನಿ ಅವರ ಸಂಸ್ಥೆಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದರು. ೨೫ ಕ್ಕೂ ಹೆಚ್ಚು…

ಆರ್‌ಸಿಬಿ.ಕೆಎಸ್‌ಸಿಎ ವಿರುದ್ಧ ಕ್ರಿಮಿನಲ್ ಕೇಸ್‌ಗೆ ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು,ಜು,೨೪-ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ, ಮೈಕೆಲ್ ಡಿ. ಕುನ್ಹಾ ವಿಚಾರಣಾ ಆಯೋಗದ ವರದಿಯನ್ನು ರಾಜ್ಯ ಸಚಿವ ಸಂಪುಟವು ಅಂಗೀಕರಿಸಿದೆ, ಈ ಮೂಲಕ ಆಯೋಗದ ಶಿಫಾರಸಿನಂತೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ, ಮೈಕೆಲ್ ಡಿ ಕುನ್ಹಾ ಆಯೋಗದ ವರದಿಯ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು. ದುರಂತಕ್ಕೆ ಕಾರಣವಾದ ಅಂಶಗಳು ಮತ್ತು ಅದಕ್ಕೆ…

ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಹಿಂಪಡೆದು, ಮಹದಾಯಿ ಯೋಜನೆ ಕಾಮಗಾರಿ ಶೀಘ್ರ ಪ್ರಾರಂಭ ಮಾಡುತ್ತೇವೆ: ಡಿ.ಕೆ. ಶಿವಕುಮಾರ್ ಗುಡುಗು

ಬೆಂಗಳೂರು, ಜು. 24-ಮಹದಾಯಿ ಯೋಜನೆಗೆ ಕೇಂದ್ರ ಅರಣ್ಯಇಲಾಖೆ ಅನುಮತಿ ನೀಡುವುದಿಲ್ಲ ಎಂಬ ಗೋವಾ ಸಿಎಂ ಪ್ರಮೋದ್ ಸಾವಂತ್ ಅವರ ಹೇಳಿಕೆ ಖಂಡನೀಯ. ಸುಪ್ರೀಂ ಕೋರ್ಟ್ ನಲ್ಲಿ ನಾವು ಸಲ್ಲಿಸಿರುವ ಅರ್ಜಿ ಹಿಂಪಡೆದು, ಶೀಘ್ರವೇ ಕಾಮಗಾರಿ ಆರಂಭಿಸುತ್ತೇವೆ. ಅವರು ಅದನ್ನು ತಡೆಯಲಿ, ನಾನೂ ನೋಡುತ್ತೇನೆ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಗುಡುಗಿದ್ದಾರೆ. ನೀರಾವರಿ ಸಚಿವರೂ ಆಗಿರುವ ಶಿವಕುಮಾರ್ ಅವರು ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು. ಕೇಂದ್ರ ಸರಕಾರ ಯಾವುದೇ ಕಾರಣಕ್ಕೂ ಮಹದಾಯಿ…

ದರ್ಶನ್ ಜಾಮೀನು ಅರ್ಜಿ ; ಆದೇಶ ಕಾಯ್ದಿರಿಸಿದ ಸುಪ್ರೀಂ

ನವದೆಹಲಿ,ಜು,24-ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ 7 ಮಂದಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಸುಪ್ರೀಂಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ. ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಜೆ.ಬಿ ಪರ್ದೀವಾಲ ನೇತೃತ್ವದ ಪೀಠ ವಿಚಾರಣೆ ನಡೆಸಿತು. ಎರಡು ಕಡೆ ವಾದ ಆಲಿಸಿದ ನ್ಯಾಯಪೀಠ ಅಂತಿಮ ಆದೇಶವನ್ನ ಕಾಯ್ದಿರಿಸಿದ್ದು, ನಟ ದರ್ಶನ್ ಪರ ವಕೀಲರಿಗೆ ಒಂದು ವಾರದಲ್ಲಿ ಲಿಖಿತ ವಾದ ಸಲ್ಲಿಸಲು ಸೂಚನೆ ನೀಡಿತು. 3 ಪುಟದೊಳಗೆ ವಾದಾಂಶ…

Girl in a jacket