Girl in a jacket

Daily Archives: August 5, 2025

ನಾಯಕನಹಟ್ಟಿ; ಸ್ಥಳೀಯ ವ್ಯಾಪಾರಸ್ಥರಿಗೆ ಆದ್ಯತೆ ನೀಡಲು ಒತ್ತಾಯ

ವರದಿ :- ಅಂಜನೇಯ ನಾಯಕನಹಟ್ಟಿ ನಾಯಕನಹಟ್ಟಿ ,ಆ,05-ಹೊರರಾಜ್ಯದ ವ್ಯಾಪಾರಸ್ಥರ ಬದಲಾಗಿ ಸ್ಥಳೀಯ ವ್ಯಾಪಾರಸ್ಥರಿಗೆ ಮೊದಲ ಆದ್ಯತೆ ನೀಡುವಂತೆ ಪಂಚಾಯಿತಿ ಮುಖ್ಯಾಧಿಕಾರಿ ಶ್ರೀನಿವಾಸ್ಅವರಿಗೆ ವಿವಿಧ ಸಂಘಟನೆಗಳು ಮನವಿ ಸಲ್ಲಿಸಿದವು. ಪಟ್ಟಣದ ಕರ್ನಾಟಕ ರಾಜ್ಯ ರೈತ ಹಸಿರು ಸೇನೆ, ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್‌ಕುಮಾರ್ (ಶೆಟ್ಟಿಬಣ), ಕರ್ನಾಟಕ ರಕ್ಷಣ ವೇದಿಕೆ ಕನ್ನಡ ಸೇನೆ ಹಾಗೂ ಕರುನಾಡ ನವ ನಿರ್ಮಾಣ ವೇದಿಕೆ ನಾಯಕನಹಟ್ಟಿ ವರ್ತಕರ ಸಂಘದಿಂದ ಮಂಗಳವಾರ ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶ್ರೀನಿವಾಸ್‌ರವರಿಗೆ ಮನವಿ ಸಲ್ಲಿಸಿದರು. ನಾಯಕನಹಟ್ಟಿ ಪಟ್ಟಣದಲ್ಲಿ ವಿವಿಧ…

ನವರಂಗಿ ಆಟ ಆಡಬೇಡಿ ಅಶೋಕ್ ಹೇಳಿಕೆಗೆ ಸಿಎಂ ತಿರುಗೇಟು

ಬೆಂಗಳೂರು, ಆ,05-ಅಧಿಕಾರ ಇದ್ದಾಗ ನವರಂಗಿ ಆಟ,ವಿರೋಧ ಪಕ್ಷದಲ್ಲಿದ್ದಾಗ ಗೋಸುಂಬೆ ನಾಟಕ..!ಅಧಿಕಾರ ಇದ್ದಾಗ ಹಗಲುವೇಷ,ವಿರೋಧಪಕ್ಷದಲ್ಲಿದ್ದಾಗ ರೋಷಾವೇಶ..!ಸನ್ಮಾನ್ಯ ಆರ್ ಅಶೋಕ್ ಅವರೇ,ಈ ಬಣ್ಣನೆ ನಿಮ್ಮ ಆತ್ಮವಂಚಕ ವ್ಯಕ್ತಿತ್ವಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯ ಮಾಡಿದ್ದಾರೆ ಸಾರಿಗೆ ನೌಕರರು ಮೊದಲ ಬಾರಿ ವೇತನ‌ ಪರಿಷ್ಕರಣೆಗಾಗಿ ಮುಷ್ಕರ ನಡೆಸಿದಾಗ ಸಾರಿಗೆ ಸಚಿವರಾಗಿದ್ದವರು ನೀವೇ ಅಲ್ಲವೇ? ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲಿಯೇ ಮೊದಲ ಬಾರಿಗೆ 15 ದಿವಸಗಳ‌ ಸುದೀರ್ಘ ಮುಷ್ಕರ ನಡೆದಾಗಲೂ ಸಾರಿಗೆ ಸಚಿವರಾಗಿ ಕೈಕಟ್ಟಿ ಕೂತು ತಮ್ಮ ಅಸಾಮರ್ಥ್ಯ ಪ್ರದರ್ಶಿಸಿದ್ದೂ ನೀವೇ…

ಸಾರಿಗೆ ನೌಕರರ ಮುಷ್ಕರ ಮುಂದೂಡಿಕೆ; ಬಸ್ ಸಂಚಾರ ಆರಂಭ

ಬೆಂಗಳೂರು, ಆ-ಹೈಕೋರ್ಟ್ ಸೂಚನೆಯ ಮೇರೆಗೆ ಸಾರಿಗೆ ನೌಕರರು ಆರಂಭಿಸಿದ್ದ ಮುಷ್ಕರವನ್ನು ಮುಂದೂಡಿದ್ದಾರೆ. ಈ ಹಿನ್ನೆಲೆಯಲ್ಲಿ ತಕ್ಷಣದಿದಂದಲೇ ಬಸ್ ಸಂಚಾರ ಆರಂಭವಾಗಿದೆ.ಕರ್ನಾಟಕ ಹೈಕೋರ್ಟ್ ಸೂಚನೆಯ ಮೇರೆಗೆ ಸಾರಿಗೆ ನೌಕರರ ಮುಷ್ಕರವನ್ನು ಮುಂದೂಡಿಕೆ ಮಾಡುತ್ತಿರುವುದಾಗಿ ಸಾರಿಗೆ ಸಂಘಟನೆಗಳ ಜಂಟಿ ಕ್ರಿಯಾಸಮಿತಿಯ ಅಧ್ಯಕ್ಷ ಅನಂತ ಸುಬ್ಬಾರಾವ್ ಘೋಷಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ರಾಜ್ಯಾಧ್ಯಂತ ಈ ಕ್ಷಣದಿಂದಲೇ ಹೈಕೋರ್ಟ್ ಸೂಚನೆಯ ಮೇರೆಗೆ ನಾವು ಸಾರಿಗೆ ನೌಕರರ ಮುಷ್ಕರವನ್ನು ಮುಂದೂಡಿಕೆ ಮಾಡುವುದಾಗಿ ಘೋಷಿಸಿದರು. ಜನರಿಗೆ ನಿಮ್ಮ ಮುಷ್ಕರದಿಂದ ಸಮಸ್ಯೆ ಆಗಬಾರದು. ಮುಷ್ಕರ ನಿಂತಿರುವ…

ಆ.10ರಂದು ಪ್ರಧಾನಿಗಳಿಂದ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ

ಬೆಂಗಳೂರು, ಆ.05-“ಮೆಟ್ರೋ ಯೋಜನೆ ಕೇವಲ ಕೇಂದ್ರ ಸರ್ಕಾರದ ಯೋಜನೆಯಲ್ಲ. ಇದರಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಪಾಲುದಾರಿಕೆ ಇದೆ. ಇದರಲ್ಲಿ ಜನರ ಸೇವೆ ಮುಖ್ಯವೇ ಹೊರತು, ಕ್ರೆಡಿಟ್ ರಾಜಕಾರಣವಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್ ಅವರು, ಮೆಟ್ರೋ ‌ಹಳದಿ ಮಾರ್ಗದಲ್ಲಿ ಮಂಗಳವಾರ ಸಂಚರಿಸಿ ಪರಿಶೀಲನೆ ನಡೆಸಿದರು. ಈ ವೇಳೆ ಅವರು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಉದ್ಘಾಟನಾ ಕಾರ್ಯಕ್ರಮವನ್ನು ರಾಜ್ಯ ಸರ್ಕಾರ ಅಥವಾ ಕೇಂದ್ರ ಸರ್ಕಾರ ನಿಗದಿ…

Girl in a jacket