Girl in a jacket

Daily Archives: August 10, 2025

ಕಾಟಾಚಾರಕ್ಕೆ ಅಧಿವೇಶನ: ಬಿ.ವೈ.ವಿಜಯೇಂದ್ರ

ಬೆಂಗಳೂರು,ಆ,10-ನಾಳೆಯಿಂದ ಆರಂಭವಾಗುವ ಅಧಿವೇಶನದಲ್ಲಿ ಈ ಸರಕಾರಕ್ಕೆ ಚಾಟಿ ಬೀಸುವ ನಿಟ್ಟಿನಲ್ಲಿ ಯಾವ್ಯಾವ ವಿಚಾರಗಳನ್ನು ಸದನದಲ್ಲಿ ಚರ್ಚಿಸಬೇಕು ಎಂಬ ವಿಷಯವನ್ನು ಚರ್ಚಿಸಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಬಿಜೆಪಿ- ಜೆಡಿಎಸ್ ಸಮನ್ವಯ ಸಮಿತಿ ಸಭೆಯ ಬಳಿಕ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸದನ 15- 20 ದಿನ ನಡೆಯಬೇಕಿತ್ತು. 8-9 ದಿನಗಳಿಗೆ ಸೀಮಿತ ಮಾಡಿದ್ದಾರೆ. ಸರಕಾರವು ಕಾಟಾಚಾರಕ್ಕೆ ಅಧಿವೇಶನ ನಡೆಸುತ್ತಿದೆ ಎಂದು ಟೀಕಿಸಿದರು. ರೈತರ ಸಮಸ್ಯೆಯನ್ನು ವಿಶೇಷವಾಗಿ ತೆಗೆದುಕೊಳ್ಳುತ್ತೇವೆ. ಸಿದ್ದರಾಮಯ್ಯನವರ…

ಮೆಟ್ರೋ ಯೋಜನೆಗೆ ಕೇಂದ್ರಕ್ಕಿಂತ ರಾಜ್ಯ ಸರ್ಕಾರ ಹೆಚ್ಚು ಹಣ ನೀಡುತ್ತಿದೆ- ಸಿದ್ಧರಾಮಯ್ಯ

ಬೆಂಗಳೂರು ಆ10-ಮೆಟ್ರೋ ಯೋಜನೆಗೆ ರಾಜ್ಯ ಸರ್ಕಾರ ಶೇ. 87.37 ರಷ್ಟು ಹಣ ನೀಡುತ್ತಿದ್ದು ಕೇಂದ್ರ ಸರ್ಕಾರದ ಪಾಲು ಕೇವಲ ಶೇ12.63 ರಷ್ಟಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವರಿಸಿದರು. ಮೆಟ್ರೋ ಯೋಜನೆಯ 2ನೇ ಹಂತದ ಹಳದಿ ಮಾರ್ಗದ ಉದ್ಘಾಟನೆ ಹಾಗೂ ಜೆ.ಪಿ.ನಗರ 4ನೇ ಹಂತದ ಶಂಕುಸ್ಥಾಪನೆ ನೆರವೇರಿಸಿ ಹಾಗೂ ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದ ಬಳಿಕ ಮಾತನಾಡಿದರು.ಕೇಂದ್ರ ಸರ್ಕಾರದ ಸಹಭಾಗಿತ್ವವೂ ಸಹ ಬೆಂಗಳೂರು ಮೆಟ್ರೋ ಯೋಜನೆಯ ಅನುಷ್ಠಾನಕ್ಕೆ ಕಾರಣವಾಗಿದೆ. ಮೆಟ್ರೋ ಯೋಜನೆಗೆ ಕೇಂದ್ರ ಸರ್ಕಾರ ಹಣಕಾಸು…

15,611 ಕೋಟಿ ವೆಚ್ಚದ ಮೆಟ್ರೋ ಹಂತ-3 ರ ಕಾಮಗಾರಿಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ

ಬೆಂಗಳೂರು,ಆ,10-ಬೆಂಗಳೂರಿನ ಜನರ ಕೌಶಲ್ಯ ಶ್ಲಾಘನೀಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ.ಇಂದು 15,611 ಕೋಟಿ ರೂ ವೆಚ್ಚದ ಬೆಂಗಳೂರು ಮೆಟ್ರೋ ಹಂತ-3 ರ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಬೆಂಗಳೂರು ಯೆಲ್ಲೋ ಲೈನಿನ ಉದ್ಘಾಟನೆ ಮಾಡಲಾಗಿದೆ. ಇಂದು 3 ಹೊಸ ವಂದೇ ಭಾರತ್ ರೈಲು ಸೇವೆಯನ್ನೂ ಆರಂಭಿಸಿದ್ದೇವೆ ಎಂದು ತಿಳಿಸಿದರು. ಆಪರೇಷನ್ ಸಿಂದೂರದ ಬಳಿಕ ಮೊದಲ ಬಾರಿಗೆ ಬೆಂಗಳೂರಿಗೆ ಬಂದಿದ್ದೇನೆ. ಈ ಕಾರ್ಯಾಚರಣೆಯಲ್ಲಿ ಸೇನೆಯ ಸಫಲತೆ ಶ್ಲಾಘನೀಯ ಎಂದು ತಿಳಿಸಿದರು. ಉಗ್ರರ ವಿರುದ್ಧ ಕೈಗೊಂಡ…

Girl in a jacket