Girl in a jacket

Daily Archives: August 13, 2025

ಅಶ್ವತ್ ನಾರಾಯಣ ನೀನು, ನಿನ್ನ ಪಕ್ಷ ಭ್ರಷ್ಟಾಚಾರದ ಪಿತಾಮಹ: ಡಿ.ಕೆ. ಶಿವಕುಮಾರ್ ವಾಗ್ದಾಳಿ

*ಅಶ್ವತ್ ನಾರಾಯಣ ನೀನು, ನಿನ್ನ ಪಕ್ಷ ಭ್ರಷ್ಟಾಚ ಬೆಂಗಳೂರು, ಆ.13-ಅಶ್ವತ್ ನಾರಾಯಣ ನೀನು, ನಿನ್ನ ಪಕ್ಷ ಭ್ರಷ್ಟಾಚಾರದ ಪಿತಾಮಹರು. ರಾಮನಗರದಲ್ಲಿ ಒಂದೂ ಕ್ಷೇತ್ರ ಗೆಲ್ಲಲಾಗದವ, ಅಲ್ಪಸಂಖ್ಯಾತ ನಾಯಕನನ್ನು ಅಸಮರ್ಥ ಎನ್ನುತ್ತೀಯಾ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹರಿಹಾಯ್ದರು. ವಿಧಾನಸಭೆ ಕಲಾಪದಲ್ಲಿ ರಸಗೊಬ್ಬರ ಕೊರತೆ ವಿಚಾರವಾಗಿ ನಡೆದ ಚರ್ಚೆ ವೇಳೆ ಆಡಳಿತ ಹಾಗೂ ವಿರೋಧ ಪಕ್ಷಗಳ ನಡುವೆ ಬುಧವಾರ ಬಿರುಸಿನ ಮಾತಿನ ಚಕಮಕಿ ನಡೆಯಿತು. ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಅವರು ಚರ್ಚೆ ವೇಳೆ ಮಾತನಾಡುವಾಗ ತಪ್ಪು…

ಸಣ್ಣ ಉಕ್ಕು ಕ್ಷೇತ್ರದ ಕ್ಷಮತೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮೆಚ್ಚುಗೆ

ನವದೆಹಲಿ,ಆ,13-ಸಣ್ಣ ಪ್ರಮಾಣದ ಉಕ್ಕು ಉತ್ಪಾದಿತ ಕ್ಷೇತ್ರವು ರಾಷ್ಟ್ರದ ಅಭಿವೃದ್ಧಿಯ ಬೆನ್ನೆಲುಬಿನಂತೆ ಕೆಲಸ ಮಾಡುತ್ತಿದ್ದು; 2030ರ ವೇಳೆಗೆ ವಾರ್ಷಿಕ 300 ದಶಲಕ್ಷ ಟನ್ ಮತ್ತು 2047ರ ವೇಳೆಗೆ 500 ದಶಲಕ್ಷ ಟನ್ ಉಕ್ಕು ಉತ್ಪಾದಿಸುವ ಕಾರ್ಯಸೂಚಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿದೆ ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು. ನವದೆಹಲಿಯ ವಿಜ್ಞಾನ ಭವನದಲ್ಲಿ ಸಣ್ಣ ಪ್ರಮಾಣದ ಉಕ್ಕು ಕೈಗಾರಿಕೆಗಳ ಸವಾಲುಗಳ ಕುರಿತು ಉಕ್ಕು ಸಚಿವಾಲಯ ಹಮ್ಮಿಕೊಂಡಿದ್ದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು…

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

ಬೆಂಗಳೂರು,ಆ,13- ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾಜೀ ಅವರ ಅಪೇಕ್ಷೆಯಂತೆ ಸ್ವಾತಂತ್ರ್ಯೋತ್ಸವ ಸಂಭ್ರಮವನ್ನು ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಪ್ರತಿಯೊಬ್ಬರ ಮನೆಯ ಮೇಲೂ ತ್ರಿವರ್ಣ ಧ್ವಜ ಹಾರಿಸಬೇಕು. ತ್ರಿವರ್ಣ ಧ್ವಜ ರಾರಾಜಿಸುವ ಮೂಲಕ ಪ್ರತಿಯೊಬ್ಬ ಭಾರತೀಯರಲ್ಲೂ ದೇಶದ ಬಗ್ಗೆ ಸದ್ಭಕ್ತಿ, ಶ್ರದ್ಧೆ ಬರಬೇಕೆಂಬ ಸದುದ್ದೇಶದಿಂದ ಬಿಜೆಪಿ, ರಾಜ್ಯದಲ್ಲೂ ಅಭಿಯಾನ ನಡೆಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ‘ಹರ್ ಘರ್ ತಿರಂಗ’ ಅಭಿಯಾನದ ಪ್ರಯುಕ್ತ ಗುಟ್ಟಹಳ್ಳಿಯ ಮಾರುತಿ ಬಡಾವಣೆಯಲ್ಲಿರುವ…

ಬಾಲ್ಯವಿವಾಹ ತಡೆಗಟ್ಟಲು ಸರ್ಕಾರದಿಂದ ಕಠಿಣ ಕ್ರಮ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು, ಆ,13-ಬಾಲ್ಯವಿವಾಹ ಸಾಮಾಜಿಕ ಪೀಡುಗಾಗಿದ್ದು, ಇದನ್ನು ಬೇರುಮಟ್ಟದಿಂದ ಕಿತ್ತೊಗೆಯಬೇಕು. ಬಾಲ್ಯವಿವಾಹ ತಡೆಗಟ್ಟಲು ಸರ್ಕಾರ ಸರ್ವಸನ್ನದ್ಧವಾಗಿದ್ದು, ಇದಕ್ಕೆ ಎಲ್ಲರ ಸಹಕಾರವೂ ಅಗತ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಮಳೆಗಾಲದ ಅಧಿವೇಶನದ ಮೂರನೇ ದಿನವಾದ ಬುಧವಾರ ಚಿಕ್ಕನಾಯಕನಹಳ್ಳಿ ಕ್ಷೇತ್ರದ ಶಾಸಕ ಸುರೇಶ್ ಬಾಬು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೆಲವು ಸಮುದಾಯ ಮತ್ತು ಪಂಗಡಗಳಲ್ಲಿ ಆಚರಣೆಯಲ್ಲಿರುವ ಸಾಮಾಜಿಕ ಪದ್ಧತಿಗಳಿಂದಾಗಿ ಬಾಲ್ಯವಿವಾಹಗಳು ನಡೆಯುತ್ತಿದ್ದು, ಇದರಿಂದಾಗಿ ಬಾಲಗರ್ಭಿಣಿಯರ ಸಂಖ್ಯೆ ಹೆಬ್ಬಾಗುತ್ತಿದೆ, ಬಾಲ್ಯ ವಿವಾಹಗಳ ಸಂಖ್ಯೆ…

Girl in a jacket