ಹಿಂದುತ್ವ ತಮ್ಮ ಮನೆ ಆಸ್ತಿ ಎಂದು ಬಿಜೆಪಿಯವರು ಭಾವಿಸಿದ್ದಾರೆ- ಡಿಕೆಶಿ
ಬೆಂಗಳೂರು, ಆ.16-“ಮುಸುಕುಧಾರಿ ನ್ಯಾಯಾಲಯದಲ್ಲಿ ದೂರು ಕೊಟ್ಟಾಗ ಮಾತನಾಡದ ಬಿಜೆಪಿಗರು ಈಗ ರಾಜಕೀಯ ಮಾಡುತ್ತಿದ್ದಾರೆ. ಹಿಂದುತ್ವ ತಮ್ಮ ಮನೆ ಆಸ್ತಿ ಎಂದು ಅವರು ಭಾವಿಸಿದ್ದಾರೆ. ಬಿಜೆಪಿಯವರಿಗೆ ಧರ್ಮಸ್ಥಳದ ಮೇಲೆ ಪ್ರೀತಿ ಇಲ್ಲ, ಅವರಿಗೆ ಬರೀ ರಾಜಕೀಯಕ್ಕಾಗಿ ಧರ್ಮಸ್ಥಳ ಬೇಕಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಾಗ್ದಾಳಿ ನಡೆಸಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿ.ಕೆ. ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು. ಬಿಜೆಪಿಯವರ ನಿಯೋಗ ಇಂದು ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿದೆ ಎಂದು ಕೇಳಿದ ಪ್ರಶ್ನೆಗೆ, “ಬಿಜೆಪಿಯವರು ಆರಂಭದಲ್ಲಿ…