Girl in a jacket

Daily Archives: August 21, 2025

ಮಂಡ್ಯ ಜಿಲ್ಲೆ ಸೇರಿ ರಾಜ್ಯದ ಹೆದ್ದಾರಿ ಬಗ್ಗೆ ಗಡ್ಕರಿಯೊಂದಿಗೆ ಎಚ್.ಡಿ.ಕೆ ಚರ್ಚೆ

ನವದೆಹಲಿ,ಆ,21-ಮಂಡ್ಯ ಲೋಕಸಭೆ ಕ್ಷೇತ್ರದ ಹಾಲಿ ಹಾಗೂ ಮುಂದೆ ಕೈಗೊಳ್ಳಲಿರುವ ಹೆದ್ದಾರಿ ಯೋಜನೆಗಳ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಹೆದ್ದಾರಿ ಮತ್ತು ಭೂಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಗಡ್ಕರಿ ಅವರ ನಿವಾಸಕ್ಕೆ ತಮ್ಮ ಆಪ್ತ ಅಧಿಕಾರಿಗಳ ಜತೆ ತೆರಳಿ ಭೇಟಿ ಮಾಡಿದ ಕುಮಾರಸ್ವಾಮಿ ಅವರು; ಈಗಾಗಲೇ ಮಂಡ್ಯ ಜಿಲ್ಲೆಯಲ್ಲಿ ಕಾರ್ಯಗತ ಆಗುತ್ತಿರುವ ಹೆದ್ದಾರಿ ಯೋಜನೆಗಳ ಬಗ್ಗೆ ಸಮಾಲೋಚನೆ ನಡೆಸಿದರು. ಈಗಾಗಲೇ ಹಲವಾರು ಯೋಜನೆಗಳ ಬಗ್ಗೆ ಮನವಿ ಮಾಡಿದ್ದು, ಬಹುತೇಕ…

ಮಹೇಶ್ ಶೆಟ್ಟಿ ತೀಮಿರೋಡಿ ಬಂಧನ

ಉಡುಪಿ,ಆ,21-ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದ ಮೇಲೆ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ಎರಡು ಬಾರಿ ನೋಟಿಸ್ ನೀಡಿದರೂ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಮಹೇಶ್ ತಿಮರೋಡಿ ಅವರನ್ನ ಬ್ರಹ್ಮಾವರ ಠಾಣಾ ಪೊಲೀಸರು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ ಸುತ್ತಮುತ್ತ ವಾಹನ ಸಂಚಾರ ನಿರ್ಬಂಧಿಸಲಾಗಿದ್ದು ಪೊಲೀಸ್ ಠಾಣೆಗೆ ಬಿಗಿ ಭದ್ರತೆ ಒದಗಿಸಲಾಗಿದೆ. ಬ್ರಹ್ಮಾವರ ಠಾಣೆ ಬಳಿ ಜನ ಸೇರುವಂತಿಲ್ಲ.…

ದಾವಣಗೆರೆಯಲ್ಲಿ ಸುಸ್ಥಿರ ಭತ್ತದ ಕೃಷಿ ಯೋಜನೆಗೆ ಪ್ರಾಯೋಗಿಕ ಚಾಲನೆ.

ಬೆಂಗಳೂರು ಆ,21-ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ ತಕ್ಕಂತೆ ಲಭ್ಯವಾಗಲು ಕೃಷಿ ಇಲಾಖೆಯು ಮಹತ್ವದ ಹೆಜ್ಜೆ ಇಟ್ಟಿದೆ.. “ರೈತ ಕರೆ ಕೇಂದ್ರ” ಉನ್ನತೀಕರಣದ ಮಹತ್ವದ ಒಡಂಬಡಿಕೆಗೆ ವಿಕಾಸಸೌಧ ಕಚೇರಿಯಲ್ಲಿ ಇಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿಯವರು ಸಹಿ ಹಾಕಿದರು. ಸಚಿವ ಚಲುವರಾಯಸ್ವಾಮಿಯವರು ಕೃಷಿ ಇಲಾಖೆಯ ಅಧಿಕಾರ ವಹಿಸಿಕೊಂಡ ನಂತರ ರೈತರ ಅಭಿವೃದ್ಧಿ ರೈತ ಪರ ಕೆಲಸಕ್ಕೆ ಒತ್ತು ನೀಡಿದ್ದು, ಈಗಾಗಲೇ ರೈತ ಕರೆ ಕೇಂದ್ರಕ್ಕೆ ಆಧುನಿಕ ತಂತ್ರಜ್ಞಾನದ ಸ್ಫರ್ಶ ನೀಡಿರುವ ಸಚಿವರು,…

ಪಿಓಪಿ ಬಳಸುವುದಿಲ್ಲವೆಂದು ಗಣೇಶೋತ್ಸವ ಸಮಿತಿಯಿಂದ ಮುಚ್ಚಳಿಗೆ ಬರೆಸಿಕೊಳ್ಳಲು ಸೂಚನೆ: ಖಂಡ್ರೆ

ಬೆಂಗಳೂರು, ಆ.21- ಸಾರ್ವಜನಿಕ ಗಣೇಶೋತ್ಸವಗಳಲ್ಲಿ ಪಿಓಪಿ ಗಣಪತಿ ಮೂರ್ತಿ ಬಳಸುವುದಿಲ್ಲವೆಂದು ಪೆಂಡಾಲ್ ಗೆ ಅನುಮತಿ ನೀಡುವ ಮುನ್ನ ಗಣೇಶೋತ್ಸವ ಸಮಿತಿಗಳಿಂದ ಮುಚ್ಚಳಿಕೆ ಬರೆಸಿಕೊಳ್ಳಲು ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಕಾಸ ಸೌಧದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಅವರು, ನಾವು ಶ್ರದ್ಧಾಭಕ್ತಿಯಿಂದ ಆಚರಿಸುವ ಗಣೇಶೋತ್ಸವದಿಂದ ಜಲಚರಗಳಿಗೆ ಮಾರಕವಾಗಬಾರದು. ಈ ನಿಟ್ಟಿನಲ್ಲಿ ಗಣೇಶೋತ್ಸವ ಸಮಿತಿಗಳು ಮತ್ತು ಸಾರ್ವಜನಿಕರು ಪಿಓಪಿ ಗಣಪತಿ ಮೂರ್ತಿಗಳನ್ನು ಖರೀದಿಸದೆ, ಪರಿಸರ ಸ್ನೇಹಿಯಾದ ಮಣ್ಣಿನ ಗಣಪತಿ…

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಬೆಂಗಳೂರು, ಆ.21-ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ ಗುರುವಾರ ಅಂಗೀಕಾರ ದೊರೆಯಿತು. ವಿಧಾನಸಭೆಯಲ್ಲಿ ಅಂಗೀಕೃತ ಸ್ವರೂಪದಲ್ಲಿರುವ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025’ ಅನ್ನು ಬೆಂಗಳೂರು ನಗರಾಭಿವೃದ್ದಿ ಸಚಿವರೂ ಆದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮೇಲ್ಮನೆಯಲ್ಲಿ ಮಂಡಿಸಿದರು. ಅಲ್ಪಚರ್ಚೆ ಬಳಿಕ ಅನುಮೋದನೆ ನೀಡಲಾಯಿತು. ತಿದ್ದುಪಡಿ ವಿಧೇಯಕದ ಪ್ರಸ್ತಾವನೆ ವೇಳೆ ಮಾತನಾಡಿದ ಶಿವಕುಮಾರ್ ಅವರು, “ಈ ವಿಧೇಯಕದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಸಂವಿಧಾನದ 74ನೇ ತಿದ್ದುಪಡಿ ಅಡಿಯಲ್ಲಿ ಬರುವ ಪಾಲಿಕೆಗಳ ವಿಚಾರದಲ್ಲಿ…

ಬಿಜೆಪಿಯಿಂದ ಧರ್ಮಯಾತ್ರೆ’ಗೆ ಚಾಲನೆ

ಬೆಂಗಳೂರು,ಆ21-: ಬಿಜೆಪಿ ಬ್ಯಾಟರಾಯನಪುರ ಕ್ಷೇತ್ರದ ವತಿಯಿಂದ ರಾಜ್ಯ ಬಿಜೆಪಿ ಕಾರ್ಯದರ್ಶಿ ಹೆಚ್.ಸಿ. ತಮ್ಮೇಶ್ ಗೌಡ ಅವರ ನೇತೃತ್ವದಲ್ಲಿ ಕೊಡಿಗೇಹಳ್ಳಿಯ ಶ್ರೀ ಗುಂಡಾಂಜನೇಯ ಸ್ವಾಮಿ ದೇವಾಲಯದಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ತನಕ ನಡೆಯುವ ‘ಧರ್ಮಯಾತ್ರೆ’ ಅಭಿಯಾನಕ್ಕೆ ಇಂದು ಬೆಳಿಗ್ಗೆ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಚಾಲನೆ ನೀಡಿದರು. ವಿಶೇಷ ಪೂಜೆ ನೆರವೇರಿಸಿದ ನಂತರ ನೂರಾರು ವಾಹನಗಳೊಂದಿಗೆ ಅಭಿಯಾನವನ್ನು ಆರಂಭಿಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರವನ್ನು ಖಂಡಿಸಿ ಈ ಯಾತ್ರೆ ನಡೆಯುತ್ತಿದೆ. ಇಂದು ಸಂಜೆ…

ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿಗೆ ಸರ್ಕಾರ ಅಸ್ತು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಆ, 20 -ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿಗೆ ಸರ್ಕಾರ ಕಟಿಬದ್ಧವಾಗಿದ್ದು ಈ‌ ಕುರಿತು ಶೀಘ್ರವೇ ಆದೇಶ ಹೊರಡಿಸಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನ ಪರಿಷತ್ ನಲ್ಲಿ ಇಂದು ತಿಳಿಸಿದರು ಒಳಮೀಸಲಾತಿ ಕುರಿತು ವಿಧಾನ‌ ಪರಿಷತ್‌ನಲ್ಲಿ ಉತ್ತರಿಸಿದ ಮುಖ್ಯಮಂತ್ರಿಗಳು   ಸರ್ವೋಚ್ಛ ನ್ಯಾಯಾಲಯವು 2024ರಲ್ಲಿ ಪಂಜಾಬ್ ರಾಜ್ಯ ಮತ್ತು ಇತರರು ವರ್ಸಸ್ ದೇವಿಂದರ್ ಸಿಂಗ್ ಪ್ರಕರಣದಲ್ಲಿ ನೀಡಲಾದ ತೀರ್ಪಿನಲ್ಲಿ, ರಾಜ್ಯ ಸರ್ಕಾರಗಳಿಗೆ ಪರಿಶಿಷ್ಟ ಜಾತಿಗಳ ಉಪವರ್ಗೀಕರಣ ಮಾಡುವ ಅಧಿಕಾರವಿದ್ದು, ಸಂವಿಧಾನದ ಅನುಚ್ಚೇದ 14, 15 ಮತ್ತು 16 ರ ಮೂಲ…

Girl in a jacket