ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮತಪತ್ರ ಬಳಸಿದರೆ ಬಿಜೆಪಿಗೇಕೆ ಗಾಬರಿ?: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನೆ
ಬೆಂಗಳೂರು, ಸೆ.05-“ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮತಪತ್ರ ಬಳಸಲು ರಾಜ್ಯ ಸರ್ಕಾರ ತೀರ್ಮಾನಿಸಿದರೆ, ಬಿಜೆಪಿ ಏಕೆ ಗಾಬರಿಯಾಗಬೇಕು?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದರು. ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ ಪ್ರತಿಕ್ರಿಯಿಸಿದರು. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಕೆ ಮಾಡುವ ಸರ್ಕಾರದ ತೀರ್ಮಾನಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸುತ್ತಿದೆ ಎನ್ನುವ ಬಗ್ಗೆ ಕೇಳಿದಾಗ ಶಿವಕುಮಾರ್ ಅವರು, “ಇದು ಕರ್ನಾಟಕ ಸರ್ಕಾರದ ತೀರ್ಮಾನ. ಇದರಿಂದ ಬಿಜೆಪಿಗೆ ಆತಂಕವೇಕೆ? ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ರಾಜ್ಯ ಸರ್ಕಾರಕ್ಕೆ…