ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್ ರದ್ದತಿಗೆ ಸಿಎಂ ಸೂಚನೆ
ಬೆಂಗಳೂರು, ಸೆ,10- ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಆದರೆ ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಅರ್ಹರು ಯಾರಾದರೂ ಬಿಟ್ಟು ಹೋಗಿದ್ದರೆ ಅವರಿಗೆ ಬಿಪಿಎಲ್ ಕಾರ್ಡ್ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಸೂಚನೆ ನೀಡಿದರು. ಈಗಾಗಲೇ ಗುರುತಿಸಲಾಗಿರುವ ಅನರ್ಹ…



