ಸೆ.22 ರಿಂದ ಸಾಮಾಜಿಕ,ಶೈಕ್ಷಣಿಕ ಸಮೀಕ್ಷೆ- ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಸೆ,12-ರಾಜ್ಯದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯ ಸೆಪ್ಟಂಬರ್ 22ರಿಂದ ಅಕ್ಟೋಬರ್ 7ರವರೆಗೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸಿಎಂ ಅಧಿಕೃತ ಕಚೇರಿ ಕೃಷ್ಣದಲ್ಲಿ ನಡೆಸಿದ ಸುದ್ದಿಗೋಷ್ಟಿಯಲ್ಲಿ ಈ ವಿಷಯ ತಿಳಿಸಿದ ಅವರು,2015ರಲ್ಲಿ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜ್ ಅವರು ವರದಿಯನ್ನು ಸಲ್ಲಿಸಿದ್ದರು. ಕಾಂತರಾಜ್ ಅವರು ವರದಿಯನ್ನು ಸಲ್ಲಿಸಿ 10ವರ್ಷ ಆದ ಕಾರಣ ಹೊಸ ಸಮೀಕ್ಷೆಗೆ ತೀರ್ಮಾನ ಮಾಡಿ ಆ ಕಾರ್ಯವನ್ನು ಶಾಶ್ವತ ಹಿಂದುಳಿದ ವರ್ಗಗಳ ಆಯೋಗಕ್ಕೆ ಈಗ…