ಮೂರು ಎಪಿಎಂಸಿಗಳಲ್ಲಿ ಸಿಎನ್‌ಜಿ ಪ್ಲಾಂಟ್ ತ್ಯಾಜ್ಯದಿಂದ ಉತ್ಪಾದನೆಗೆ ಕ್ರಮ -ಸಚಿವ ಶಿವಾನಂದ ಪಾಟೀಲ
ಬೆಂಗಳೂರು,ಸೆ,18-ಬೆಂಗಳೂರಿನ ದಾಸನಪುರ, ಕೋಲಾರ ಮತ್ತು ಮೈಸೂರು ಎಪಿಎಂಸಿಗಳಲ್ಲಿ ತಲಾ 50 ಟಿಪಿಡಿ ಬಯೋ ಸಿಎನ್‌ಜಿ ಪ್ಲಾಂಟ್ ನಿರ್ಮಿಸಲಾಗುವುದು ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ಎಪಿಎಂಸಿಗಳಲ್ಲಿ ಪ್ರತಿ ದಿನ ಸಂಗ್ರಹವಾಗುವ ತ್ಯಾಜ್ಯದಿಂದ ಪ್ರಕೃತಿ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತಿದ್ದು, ಶೂನ್ಯ ತ್ಯಾಜ್ಯ ಮಾರುಕಟ್ಟೆಗಳನ್ನಾಗಿ ಪರಿವರ್ತಿಸಲು ಈ ತ್ಯಾಜ್ಯ ಬಳಕೆ ಮಾಡಿಕೊಂಡು ಬಯೋ ಸಿಎನ್‌ಜಿ ಉತ್ಪಾದನೆ ಮಾಡಲು ಯೋಜನೆ ರೂಪಿಸಲಾಗಿದೆ. ಈ ಮೂರು ಎಪಿಎಂಸಿಗಳಲ್ಲಿ ಪ್ರತಿದಿನ 20ರಿಂದ 30…