ತಾಯಿ ಚಾಮುಂಡಿ ಶಕ್ತಿ, ಧೈರ್ಯ, ಮಮತೆ ಹಾಗೂ ರಕ್ಷಕತ್ವದ ಸಂಕೇತ: ಬಾನು ಮುಷ್ತಾಕ್
ಮೈಸೂರು, ಸೆ, 22- ಮೈಸೂರು ದಸರಾ, ನಾಡಿನ ನಾಡಿ, ಸಂಸ್ಕೃತಿಯ ಉತ್ಸವ, ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳವಾಗಿದೆ ಎಂದು ಸಾಹಿತಿ ಹಾಗೂ 2025ರ ಅಂತರಾಷ್ಟ್ರೀಯ ಬೂಕರ್ ಬಹುಮಾನ ವಿಜೇತರಾದ ಶ್ರೀಮತಿ ಬಾನು ಮುಷ್ತಾಕ್ ಅವರು ತಿಳಿಸಿದರು. ಅವರು ಇಂದು ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ಅಗ್ರಪೂಜೆಯೊಂದಿಗೆ ಪ್ರಾರಂಭವಾದ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಮೈಸೂರು ದಸರಾದ ಪವಿತ್ರದ ಕ್ಷಣದಲ್ಲಿ ಚಾಮುಂಡಿ ತಾಯಯ ಕೃಪೆಯ ನೆರಳಿನಲ್ಲಿ, ಈ ವೇದಿಕೆಯಿಂದ ನಿಮ್ಮೆದುರು ನಿಲ್ಲುವ ಅವಕಾಶ ದೊರೆತಿರುವುದು ನನ್ನ…