ರಾಜ್ಯ ಹಾಗೂ ರಾಷ್ಟೀಯ ಹೆದ್ದಾರಿ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ: ಸಚಿವ ಎನ್. ಚಲುವರಾಯಸ್ವಾಮಿ
ಬೆಂಗಳೂರು, ಅ, 08-ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿಯವರು ಸೂಚಿಸಿದರು. ವಿಕಾಸಸೌಧ ಕಚೇರಿಯಲ್ಲಿಂದು ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿ ಪ್ರಾಧಿಕಾರದ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಚಿವರು ಎಲ್ಲಾ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ತ್ವರಿತವಾಗಿ ಮುಕ್ತಾಯ ಗೊಳಿಸುವಂತೆ ತಿಳಿಸಿದರು. ಮಂಡ್ಯ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಬೆಳ್ಳೂರು ಕ್ರಾಸ್, ನಾಗಮಂಗಲ, ಶ್ರೀರಂಗಪಟ್ಟಣ ವ್ಯಾಪ್ತಿಯಲ್ಲಿ ನಡೆಯಬೇಕಿರುವ…