Girl in a jacket

Daily Archives: October 13, 2025

ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು, ಅ, 13- ನಾವು ಆಗಾಗ್ಗೆ ಊಟಕ್ಕೆ ಸೇರುತ್ತೇವೆ. ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಅವರು ಇಂದು ಹುಬ್ಬಳ್ಳಿಗೆ ತೆರಳುವ ಮುನ್ನ ಕಿತ್ತೂರು ಉತ್ಸವದ ಜ್ಯೋತಿಗೆ ಚಾಲನೆ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮುಖ್ಯಮಂತ್ರಿಗಳು ತಮ್ಮ ಸಂಪುಟ ಸದಸ್ಯರಿಗಾಗಿ ಇಂದು ಆಯೋಜಿಸಿರುವ ಭೋಜನಕೂಟದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಮೇಲಿನಂತೆ ಪ್ರತಿಕ್ರಿಯೆ ನೀಡಿದರು.

ಬಾರ್ಬಡೋಸ್ ಸಂಸತ್ತಿಗೆ ಭೇಟಿ ನೀಡಿದ ಬಸವರಾಜ ಹೊರಟ್ಟಿ ಯು.ಟಿ.ಖಾದರ್

ಬೆಂಗಳೂರು, ಅ,13-68ನೇ ಅಂತರರಾಷ್ಟ್ರೀಯ ಕಾಮನ್‌ವೆಲ್ತ್ ಸಂಸದೀಯ ಸಮ್ಮೇಳನದಲ್ಲಿ ಭಾಗವಹಿಸಲು ಬಾರ್ಬಡೋಸ್‌ಗೆ ಅಧಿಕೃತ ಭೇಟಿ ನೀಡಿದ ಸಂದರ್ಭದಲ್ಲಿ, ಕರ್ನಾಟಕ ವಿಧಾನ ಪರಿಷತ್ತಿನ ಗೌರವಾನ್ವಿತ ಅಧ್ಯಕ್ಷ ಬಸವರಾಜ ಹೊರಟ್ಟಿ ಮತ್ತು ಕರ್ನಾಟಕ ವಿಧಾನಸಭೆಯ ಗೌರವಾನ್ವಿತ ಸ್ಪೀಕರ್ ಯು.ಟಿ. ಖಾದರ್ ಅವರು ಬಾರ್ಬಡೋಸ್ ಸಂಸತ್ತಿಗೆ ಭೇಟಿ ನೀಡಿದರು. ಬಾರ್ಬಡೋಸ್ ಸಂಸತ್ತಿನ ಸಭಾಧ್ಯಕ್ಷರ ಪೀಠವು ಭಾರತದಿಂದ ಕೊಡಲ್ಪಟ್ಟಿದೆ. ಇದು ಭಾರತ ಮತ್ತು ಬಾರ್ಬಡೋಸ್ ನಡುವಿನ ಸ್ನೇಹ ಮತ್ತು ಸಂಸತ್ತೀಯ ಸಹಕಾರದ ಸಂಕೇತವಾಗಿದೆ. ಈ ಸಮ್ಮೇಳನವು ಬಾರ್ಬಡೋಸ್ ಶಾಸನಾಂಗದ ಕಾರ್ಯನಿರ್ವಹಣೆಯನ್ನು ಅರ್ಥಮಾಡಿಕೊಳ್ಳಲು ಮತ್ತು ಅಂತರ-ಸಂಸದೀಯ…

Girl in a jacket