ಐನಾಕ್ಸ್ ವಿಂಡ್ ಕಂಪನಿಯಿಂದ ಕುಷ್ಟಗಿ ತಾ.ನಲ್ಲಿ ₹400 ಕೋಟಿ ಹೂಡಿಕೆ: ಎಂ ಬಿ ಪಾಟೀಲ*
ಬೆಂಗಳೂರು,ಅ,25-ಪವನ ವಿದ್ಯುತ್ ಕ್ಷೇತ್ರದಲ್ಲಿ ಅಗತ್ಯವಾಗಿ ಬೇಕಾಗಿರುವ ದೈತ್ಯಾಕಾರದ ಬ್ಲೇಡ್‌ಗಳು ಮತ್ತು ಗೋಪುರಗಳ ಉತ್ಪಾದನೆಗೆ ಹೆಸರಾಗಿರುವ ಐನಾಕ್ಸ್‌ವಿಂಡ್ ಕಂಪನಿಯು ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ಕ್ಯಾದಿಗುಪ್ಪ ಕೈಗಾರಿಕಾ ಪ್ರದೇಶದಲ್ಲಿ ₹400 ಕೋಟಿ ಬಂಡವಾಳ ಹೂಡಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಬುಧವಾರ ತಿಳಿಸಿದ್ದಾರೆ. ತಮ್ಮನ್ನು ಇಲ್ಲಿನ ಖನಿಜ ಭವನದಲ್ಲಿ ಭೇಟಿಯಾದ ಕಂಪನಿಯ ಕಾರ್ಪೊರೇಟ್ ತಂತ್ರಗಾರಿಕೆ ವಿಭಾಗದ ಅಧ್ಯಕ್ಷ ಸಂತೋಷ್ ಖೈರ್ನಾರ್ ಜೊತೆ ಅವರು ಮಾತುಕತೆ ನಡೆಸಿದರು. ಬಳಿಕ ಮಾಹಿತಿ ನೀಡಿದ ಸಚಿವರು,…