Girl in a jacket

Daily Archives: November 7, 2025

ಕಬ್ಬು ಬೆಳಗಾರರ ಸಮಸ್ಯೆಯಾಗಿರುವುದು ಕೇಂದ್ರದಿಂದ,ಆದರೂ ರಾಜ್ಯಸರ್ಕಾರ ಸಮಸ್ಯೆಗೆ ಸ್ಪಂದಿಸಲಿದೆ- ಸಿದ್ದರಾಮಯ್ಯ

ಬೆಂಗಳೂರು, ನ,07-ಕಬ್ಬು ಬೆಳೆಗಾರರಿಗೆ ನೆರವಾಗುವುದು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಜವಾಬ್ದಾರಿಯಾಗಿದೆ. ರೈತರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಎಫ್ಆರ್ಪಿ ನಿಗದಿಪಡಿಸುವುದು ಕೇಂದ್ರ ಸರ್ಕಾರದ ಕಾರ್ಯ. ಕೇಂದ್ರ ಸರ್ಕಾರ ದಿನಾಂಕ 6-05-2025ರಲ್ಲಿ ಎಫ್ಆರ್ಪಿ ನಿಗದಿಪಡಿಸಿದೆ. ಈ ಎಫ್ಆರ್ಪಿಯಲ್ಲಿ ಸಾಗಾಟ ಮತ್ತು ಕಟಾವು ವೆಚ್ಚ ಸಹ ಸೇರಿದೆ. ಸಕ್ಕರೆಯ ಎಂಎಸ್ಪಿ ಹೆಚ್ಚಳ ಮಾಡುವಂತೆ ಈ ಹಿಂದೆಯೇ ಕೇಂದ್ರ ಸರ್ಕಾರಕ್ಕೆ ನಾವು ಮನವಿ ಸಲ್ಲಿಸಿದ್ದೇವೆ. ಇದೀಗ ಕೇಂದ್ರ ಸರ್ಕಾರ ಸಮಸ್ಯೆ ಹುಟ್ಟು ಹಾಕಿದೆ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ   ಹೇಳಿದರು. ಕಬ್ಬು ಬೆಳೆಗಾರರ ಸಮಸ್ಯೆ…

ಕೃಷಿ ಸುಧಾರಣೆಗೆ, ಪೂರಕ ಸಂಶೋಧನೆಗೆ ಎನ್.ಚಲುವರಾಯಸ್ವಾಮಿ ಕರೆ

ಶಿವಮೊಗ್ಗ, ನ, 07-ರೈತರ ಉತ್ಪಾದನೆ ಹಾಗೂ ಜೀವನ ಮಟ್ಟ ಗಣನೀಯ ಸುಧಾರಣೆಗೆ ಅಗತ್ಯವಿರುವ ಪೂರಕ ಸಂಶೋಧನೆ ಮತ್ತು ತಂತ್ರಜ್ಞಾನದ ವರ್ಗಾವಣೆಗೆ ಇನ್ನಷ್ಟು ಶ್ರಮವಹಿಸುವಂತೆ ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಸೂಚನೆ ನೀಡಿದರು. ಕೆಳದಿ ಶಿವಪ್ಪ ನಾಯಕ ಕೃಷಿ ಹಾಗೂ ತೋಟಗಾರಿಕೆ ಕೃಷಿ ವಿಶ್ವ ವಿದ್ಯಾಲಯದ ವತಿಯಿಂದ ನವಿಲೆ ಕೃಷಿ ವಿವಿ ಅವರಣದಲ್ಲಿ ಏರ್ಪಡಿಸಿರುವ ‘ ಕೃಷಿ ಮೇಳ 2025ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಕೃಷಿ ಸಚಿವರು, ರೈತರು ನಿರಂತರ ಪ್ರಾಕೃತಿಕ‌ ಸವಾಲು ಎದುರಿಸಿ,ಪರಿಶ್ರಮ ಪಟ್ಟು ಕೃಷಿ ನಡೆಸುತ್ತಿದ್ದು…

ಕಬ್ಬು ಬೆಳೆಗಾರರ ಕ್ಷಮೆ ಕೇಳಲು ಮುಖ್ಯಮಂತ್ರಿ ಗೆ ವಿಜಯೇಂದ್ರ ಆಗ್ರಹ

ಬೆಂಗಳೂರು,ನ07-ಶಾಸಕ ಯಶವಂತರಾಯಗೌಡ ಪಾಟೀಲರು ಕಬ್ಬು ಬೆಳೆಗಾರರ ಹೋರಾಟದ ಬಗ್ಗೆ ಮಾತನಾಡಿ, ಅವರು ಕಬ್ಬು ಬೆಳೆಗಾರರೇ ಅಲ್ಲ ಎಂದಿದ್ದಾರೆ. ಅವರಿಗೆ ನಾಚಿಕೆ ಆಗಬೇಕು ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ. ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ಕಬ್ಬು ಬೆಳೆಗಾರರಿಗೆ ಅವಮಾನ ಮಾಡಿದ ಅವರು ತಕ್ಷಣ ಕ್ಷಮೆ ಯಾಚಿಸಬೇಕೆಂದು ಆಗ್ರಹಿಸಿದರು. ಮುಖ್ಯಮಂತ್ರಿಗಳು ಯುದ್ಧ ಬಂದಾಗ ಶಸ್ತ್ರಾಭ್ಯಾಸ ಮಾಡುವ ಬದಲಾಗಿ ಕಬ್ಬು ಅರೆಯುವ ಒಂದು ಅಥವಾ ಎರಡು ತಿಂಗಳ ಮೊದಲೇ ಈ ಸಂಧಾನ ಸಭೆ…

ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಲಾಗದೆ ಮುಖ್ಯಮಂತ್ರಿ ಬೇಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದ್ದಾರೆ- ಎಚ್ ಡಿಕೆ ಆರೋಪ

ಮೈಸೂರು,ನ,07-ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಲಾಗದ ಮುಖ್ಯಮಂತ್ರಿಗಳು ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಮಂತ್ರಿಗಳಿಗೆ ಪತ್ರ ಬರೆದಿದ್ದಾರೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು. ಮೈಸೂರಿನಲ್ಲಿ ಶುಕ್ರವಾರ ದಿಶಾ ಸಮಿತಿ ಸಭೆ ಆರಂಭಕ್ಕೆ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವರು; ರೈತರ ಕಷ್ಟಕ್ಕೆ ಸ್ಪಂದಿಸಬೇಕು ಎನ್ನುವ ಇರಾದೆ ಈ ಸರ್ಕಾರಕ್ಕೆ ಇಲ್ಲ. ಪ್ರತಿಯೊಂದು ವಿಷಯವನ್ನೂ ಕೇಂದ್ರದ ಮೇಲೆ ಹಾಕಿ ನುಣಚಿಕೊಳ್ಳುವ ಕೆಲಸ ಮಾಡುತ್ತಿದೆ ಎಂದರು. ಮುಖ್ಯಮಂತ್ರಿಗಳು…

ನಾಗರಹೊಳೆ, ಬಂಡೀಪುರ ಸಫಾರಿ, ಚಾರಣ ಇಂದಿನಿಂದಲೇ ಬಂದ್: ಈಶ್ವರ ಖಂಡ್ರೆ

ಬೀದರ್, ನ.07-ನಾಗರಹೊಳೆ ಮತ್ತು ಬಂಡೀಪುರ ಸಫಾರಿಯನ್ನು ಹಾಗೂ ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಚಾರಣವನ್ನು ಇಂದಿನಿಂದಲೇ ಬಂದ್ ಮಾಡಿ, ಸಿಬ್ಬಂದಿಯನ್ನು ಹುಲಿ ಸೆರೆ ಕಾರ್ಯಾಚರಣೆಗೆ ನಿಯೋಜಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ. ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಲಿಖಿತ ಸೂಚನೆ ನೀಡಿರುವ ಅವರು, ಸರಗೂರು ತಾಲೂಕು ಮೊಳೆಯೂರು ವಲಯದ ಹಳೆ ಹೆಗ್ಗೋಡಿಲು ಗ್ರಾಮದ ಬಳಿ ಇಂದು ಬೆಳಗ್ಗೆ ಚೌಡಯ್ಯ ನಾಯ್ಕ (35) ಎಂಬುವವರು ಹುಲಿ…

ಉತ್ತರ ಕರ್ನಾಟಕದ “ಉಡಾಳ” ನವೆಂಬರ್ 14 ರಂದು ತೆರೆಗೆ 

ದಾವಣಗೆರೆಯ ರವಿ ಶಾಮನೂರು ಹಾಗೂ ಯೋಗರಾಜ್ ಭಟ್ ಅವರು ನಿರ್ಮಿಸಿರುವ, ಅಮೋಲ್ ಪಾಟೀಲ್ ನಿರ್ದೇಶನದ ಹಾಗೂ “ಪದವಿಪೂರ್ವ” ಖ್ಯಾತಿಯ ಪೃಥ್ವಿ ಶಾಮನೂರು ನಾಯಕನಾಗಿ ನಟಿಸಿರುವ “ಉಡಾಳ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಹೆಸರಾಂತ ಕಲಾವಿದರಾದ ನವೀನ್ ಶಂಕರ್ ಹಾಗೂ ನಿಶ್ವಿಕಾ ನಾಯ್ಡು ಟ್ರೇಲರ್ ಅನಾವರಣ ಮಾಡಿ ಚಿತ್ರಕ್ಕೆ ಶುಭ ಕೋರಿದರು. ಮಾಜಿ ಸಚಿವರಾದ ಆಂಜನೇಯ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ತಮ್ಮ “ಉಡಾಳ” ಗೆಳೆಯನ್ನನ್ನು ನೆನಪಿಸಿಕೊಂಡು ಮಾತನಾಡಿದ ನಿರ್ಮಾಪಕ ಯೋಗರಾಜ್ ಭಟ್, ನಗಿಸುವುದು ಅಷ್ಟು ಸುಲಭವಲ್ಲ. ನಗು ಬರುವುದು ಅಷ್ಟು…

Girl in a jacket