ತೆರಿಗೆ ಹಾಕುತ್ತಾರೆ, ಆದರೆ ರಸ್ತೆಗುಂಡಿ ಮುಚ್ಚಿಸಲ್ಲ, ಇದು ದುಬಾರಿ ಬೆಂಗಳೂರು: ಆರ್.ಅಶೋಕ ಆಕ್ರೋಶ
ಬೆಂಗಳೂರು, ನ, 8-ಕಾಂಗ್ರೆಸ್ ಸರ್ಕಾರ ಬೆಂಗಳೂರಿನ ಜನರಿಂದ ತೆರಿಗೆ ಸಂಗ್ರಹ ಮಾಡುತ್ತಿದೆ. ಆದರೆ ರಸ್ತೆಗುಂಡಿ ಮುಚ್ಚಿಸಲ್ಲ, ಕಸ ವಿಲೇವಾರಿ ಮಾಡಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಕೇವಲ ಗ್ಯಾರಂಟಿಯ ಹೆಸರು ಹೇಳಿಕೊಂಡ ಕಾಂಗ್ರೆಸ್ ಸರ್ಕಾರ ಎರಡು ವರ್ಷಗಳಲ್ಲಿ ಬೆಂಗಳೂರಿಗೆ ಅನುದಾನ ನೀಡಿಲ್ಲ. 1,800 ಕೋಟಿ ರೂ. ಖರ್ಚು ಮಾಡಿ ರಸ್ತೆಗುಂಡಿ ಮುಚ್ಚಿಸಲಾಗಿದೆ ಎಂದು ಸರ್ಕಾರ ಹೇಳಿದೆ. ಮುಚ್ಚಿಸಿದ ಗುಂಡಿಗಳು ಮತ್ತೆ ಸೃಷ್ಟಿಯಾಗಿದೆ. ಬೆಂಗಳೂರಿನ ಜನರಿಗೆ ಈ ಸರ್ಕಾರದ ಕಾರ್ಯವೈಖರಿ ದೊಡ್ಡ…










