ಮಹಿಳಾ ಉದ್ಯಮಿಗಳಿಗೆ ಸರ್ಕಾರದಿಂದ ತ್ವರಿತ ಸಾಲ ಸೌಲಭ್ಯ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್
ಬೆಂಗಳೂರು,ನ,19- ರಾಜ್ಯದ ಮಹಿಳೆಯರು ಸಣ್ಣ ಪ್ರಮಾಣದ ಉದ್ಯಮಗಳನ್ನು ಸ್ಥಾಪಿಸಲು ಸರ್ಕಾರವು ಆರ್ಥಿಕವಾಗಿ ಮತ್ತು ಎಲ್ಲ ರೀತಿಯಲ್ಲಿ ಬೆಂಬಲ ನೀಡುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳಕರ್ ಅವರು ಭರವಸೆ ನೀಡಿದರು. ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (FKCCI) ವತಿಯಿಂದ ನಡೆದ ಅಂತಾರಾಷ್ಟ್ರೀಯ ಮಹಿಳಾ ಉದ್ದಿಮೆದಾರರ ದಿನಾಚರಣೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಮಹಿಳಾ ಉದ್ಯಮಿಗಳಿಗೆ ಅಥವಾ ಸ್ವಂತ ಉದ್ಯಮ ಆರಂಭಿಸಲು ಬಯಸುವ ಮಹಿಳೆಯರಿಗೆ ಸರ್ಕಾರವು ಶೇಕಡಾ 3ರ ವಾರ್ಷಿಕ ಬಡ್ಡಿದರದಲ್ಲಿ 5…







