ವಿಧಾನಸೌಧದಲ್ಲಿ ಪುಸ್ತಕ ಮೇಳ ಉದ್ಟಾಟನೆ: ಸದುಪಯೋಗ ಪಡಿಸಿಕೊಳ್ಳಲು ಸಿಎಂ ಕರೆ
by-ಕೆಂಧೂಳಿ
ಬೆಂಗಳೂರು ಫೆ 27-ಪುಸ್ತಕ ಮತ್ತು ಸಾಹಿತ್ಯದ ಓದು ಮನುಷ್ಯನನ್ನು ಹೆಚ್ಚೆಚ್ಚು ಮಾನವೀಯಗೊಳಿಸುತ್ತದೆ. ಆದ್ದರಿಂದ ಓದುವ ಅಭ್ಯಾಸ ಹೆಚ್ಚಿಸಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.
ವಿಧಾನಸೌಧದಲ್ಲಿ ಪ್ರಪ್ರಥಮ ಬಾರಿಗೆ ಆಯೋಜಿಸಲಾಗಿರುವ ಪುಸ್ತಕ ಮೇಳವನ್ನು ಉದ್ಘಾಟಿಸಿ ಮಾತನಾಡಿದರು.
ವಿಧಾನಸೌಧದಲ್ಲಿ ಓದುಗರ, ಸಾಹಿತ್ಯಾಸಕ್ತರ ಹಬ್ಬ. ಇದನ್ನು ಸಾಹಿತ್ಯಾಸಕ್ತರು ಸದುಪಯೋಗ ಪಡಿಸಿಕೊಳ್ಳಬೇಕು.
ಇನ್ನು ಮುಂದೆ ಪ್ರತೀ ವರ್ಷ ವಿಧಾನಸೌಧದಲ್ಲಿ ಸಾಹಿತ್ಯ, ಪುಸ್ತಕ ಹಬ್ಬ ನಡೆಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಘೋಷಿಸಿದರು.
ಸಾಹಿತ್ಯದ ಓದು ಮನುಷ್ಯನನ್ನು ಹೆಚ್ಚೆಚ್ಚು ಮಾನವೀಯಗೊಳಿಸುತ್ತದೆ.ಪುಸ್ತಕಗಳನ್ನು ಖರೀದಿಸಿ, ಮನೆ ಮನೆಯಲ್ಲಿ ಗ್ರಂಥಾಲಯ ಮಾಡಿಕೊಳ್ಳಿ.ಮಕ್ಕಳು ಮೊಬೈಲ್ ಮತ್ತು ಡಿಜಿಟಲ್ ಚಟದಿಂದ ಹೊರಗೆ ಬಂದು ಪುಸ್ತಕಗಳನ್ನು ಓದುವ ಹವ್ಯಾಸ, ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ಇದೇ ಸಂದರ್ಭದಲ್ಲಿ ಕರೆ ನೀಡಿದರು.