ಮಳವಳ್ಳಿ ವಸತಿ ಶಾಲೆಯ ದುರ್ಘಟನೆ; ಅಧಿಕಾರಿಗಳಿಂದ ಮಾಹಿತಿ ಪಡೆದ ಹೆಚ್.ಡಿ.ಕೆ by-ಕೆಂಧೂಳಿ

Share

ಮಳವಳ್ಳಿ ವಸತಿ ಶಾಲೆಯ ದುರ್ಘಟನೆ; ಅಧಿಕಾರಿಗಳಿಂದ ಮಾಹಿತಿ ಪಡೆದ ಹೆಚ್.ಡಿ.ಕೆ

by-ಕೆಂಧೂಳಿ
ನವದೆಹಲಿ,ಮಾ,16- ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನಲ್ಲಿ ಟಿ.ಕಾಗೇಪುರ ಗ್ರಾಮದ ಖಾಸಗಿ ವಸತಿ ಶಾಲೆ ಕಲುಷಿತ ಆಹಾರ ಸೇವನೆಯಿಂದ ಓರ್ವ ವಿದ್ಯಾರ್ಥಿ ಸಾವನ್ನಪ್ಪಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಮಂಡ್ಯ ಸಂಸದರು ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು, ಅಸ್ವಸ್ಥ ಮಕ್ಕಳ ಆರೋಗ್ಯದ ಬಗ್ಗೆ ತುರ್ತು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಸಂಬಂಧ ಮಳವಳ್ಳಿ ತಹಶೀಲ್ದಾರ್ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳಿಂದ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡಿರುವ ಸಚಿವರು; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿಗಳ ಆರೋಗ್ಯ ಪರಿಸ್ಥಿತಿಯನ್ನು ವಿಚಾರಿಸಿಕೊಂಡರು.

ಬೇಸಿಗೆಯಲ್ಲಿ ಕುಡಿಯುವ ನೀರು ಹಾಗೂ ಆಹಾರದ ಬಗ್ಗೆ ಜಾಗ್ರತೆಯಿಂದ ಇರಬೇಕು. ಮಕ್ಕಳಿಗೆ ನೀಡಲಾಗುವು ಆಹಾರದ ಬಗ್ಗೆ ಕಟ್ಟೆಚ್ಚರ ವಹಿಸಬೇಕು ಎಂದು ಸ್ಪಷ್ಟ ನೀಡಿರುವ ಸಚಿವರು; ಮೃತಪಟ್ಟಿರುವ ವಿದ್ಯಾರ್ಥಿ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಸರ್ಕಾರಿ ಅಥವಾ ಖಾಸಗಿ ವಸತಿ ಶಾಲೆಗಳಲ್ಲಿ ಆಹಾರದ ಬಗ್ಗೆ ಅಧಿಕಾರಿಗಳು, ಸಂಬಂಧಪಟ್ಟ ಸಿಬ್ಬಂದಿ ಎಚ್ಚರಿಕೆ ವಹಿಸಬೇಕು. ಈ ಬಗ್ಗೆ ಕಠಿಣ ನಿಗಾ ಇಡಬೇಕು ಎಂದು ತಹಶೀಲ್ದಾರ್ ಅವರಿಗೆ ಸಚಿವರು ಸೂಚನೆ ನೀಡಿದ್ದಾರೆ.

ಘಟನೆ ಬಗ್ಗೆ ನನಗೆ ಮಾಹಿತಿ ಬಂದಾಗ ನನಗೆ ತೀವ್ರ ಆಘಾತ ಉಂಟಾಯಿತು. ಈ ವಸತಿ ಶಾಲೆಯಲ್ಲಿ ಬಹುತೇಕ ಹೊರರಾಜ್ಯಗಳ ಮಕ್ಕಳೇ ಇದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಲ್ಲಾ ಮಕ್ಕಳಿಗೆ ಸೂಕ್ತ ಚಿಕಿತ್ಸೆ ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಕೇಂದ್ರ ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Girl in a jacket
error: Content is protected !!