ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿವೆ: ಅಶೋಕ್

Share

ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿವೆ: ಅಶೋಕ್

by-ಕೆಂಧೂಳಿ

ಬೆಂಗಳೂರು, ಏ, 4-ಬೆಂಗಳೂರಿನ ಬಿ.ಆರ್.ಅಂಬೇಡ್ಕರ್ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ್ ಆರ್ ಅಶೋಕ್ ಮಾಧ್ಯಮಗಳ ಜೊತೆ ಮಾತನಾಡಿ, ಈ ಘಟನೆ ನಮ್ಮ ಕಾರ್ಯಕರ್ತರಿಗೆ ನೋವು ತಂದಿದೆ. ವಿನಯ್ ಒಳ್ಳೆಯ ವಿದ್ಯಾವಂತ, ಪತ್ನಿ ಸಾಫ್ಟ್‌ವೇರ್ ಇಂಜಿನಿಯರ್. 2-3 ತಿಂಗಳಿಂದ ಎಸ್ಪಿ ಮೂಲಕ ಕಾಂಗ್ರೆಸ್ ಶಾಸಕರು, ಶಾಸಕರ ಆಪ್ತ ತೆನ್ನೀರ ಮಹಿನಾ ಕಿರುಕುಳ ನೀಡಿದ್ದಾರೆ. ಶಾಸಕ ಧಮ್ಕಿ ಹಾಕಿದ್ದನ್ನು ಡೆತ್ನೋಟ್ನಲ್ಲಿ ಉಲ್ಲೇಖ ಮಾಡಿದ್ದಾರೆ. ವಿನಯ್ ಮಡಿಕೇರಿ ಬಿಟ್ಟು ಬೆಂಗಳೂರಿನ ಮನೆಗೆ ಬಂದರೂ ಪೊಲೀಸರು ಕಿರುಕುಳ ಕೊಟ್ಟಿದ್ದಾರೆ. ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪೊಲಿಷರನ್ನು ರಾಜಕೀಯ ದ್ವೇಷ ತೀರಿಸಿಕೊಳ್ಳಲು ಬಳಸಿಕೊಳುತ್ತಿದ್ದಾರೆ. ಸಿಎಂ ಪದಕ ಲಭಿಸಿದ ಪೊಲೀಸ್ ಮೇಲೆ ಲೋಕಾಯುಕ್ತ ದಾಳಿ ಆಗಿದೆ. ವಿನಯ್ ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ಕ್ರಮ ಆಗಬೇಕು, ಅದಕ್ಕಾಗಿ ಸೂಕ್ತ ತನಿಖೆ ಆಗಬೇಕು. ಕೊಡಗು ಎಸ್ಪಿ ಅಮಾನತು ಆಗಬೇಕು. ನಾಳೆ ನಮ್ಮ ಹೋರಾಟದ ಬಗ್ಗೆ ತೀರ್ಮಾನ ಪಡೆಯುತ್ತೇವೆ. ತೆನ್ನೀರಾ, ಪೊನ್ನಣ್ಣ, ಮಂತರ್ ಗೌಡ ವಿರುದ್ಧ ದೂರು ನೀಡಿದ್ದೇವೆ ಎಂದು ಹೇಳಿದರು.

Girl in a jacket
error: Content is protected !!