ಸುಹಾಸ್ ಶೆಟ್ಟಿ ಹತ್ಯೆಪ್ರಕರಣ-ಐವರು ಆರೋಪಿಗಳು ಪೊಲೀಸರ ವಶ

Share

ಮಂಗಳೂರು,ಮೇ,೦೩-ರೌಡಿಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಐವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಸುಹಾಸ್ ಶೆಟ್ಟಿ ಕೊಲೆ ಮಾಡಿದ್ದ ಆರೋಪಿಗಳು ಸ್ವಿಪ್ಟ್ ಕಾರಿನಲ್ಲಿ ಪರಾರಿಯಾಗಿದ್ದರು. ಕಾರನ್ನು ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿ, ಹತ್ಯೆಗೆ ಬಳಸಿದ್ದ ಆಯುಧಗಳನ್ನು ಕಾರಿನಲ್ಲಿಯೇ ಬಿಸಾಡಿ ಹೋಗಿದ್ದರು. ಕೊಲೆ ಬಳಿಕ ಆರೋಪಿಗಳು ಮಂಗಳೂರಿನಲ್ಲಿಯೇ ಅವಿತು ಕುಳಿತ್ತಿದ್ದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪೊಲೀಸರು ಕಾರ್ಯಾಚರಣೆ ನಡೆಸಿ ಆಗಾಗಲೇ ಆರೋಪಿಗಳನ್ನು ಗುರುತಿಸಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಪೊಲೀಸರು ಸರ್ಕಾರಕ್ಕೆ ಮಾಹಿತಿ ನೀಡುವ ಸಾಧ್ಯತೆ ಇದೆ.

ಮಂಗಳೂರಿನ ಬಜ್ಪೆ ಕಿನ್ನಿಪದವು ಬಳಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ತಲ್ವಾರ್‌ನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ರೌಡಿಶೀಟರ್ ಸುಹಾಸ್ ಶೆಟ್ಟಿಯು ಸುರತ್ಕಲ್‌ನ ಫಾಜಿಲ್ ಕೊಲೆ ಪ್ರಕರಣದ ಪ್ರ ಮುಖ ಆರೋಪಿ.  ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಎಂಬುವವರನ್ನು ೨೦೨೨ರ ಜುಲೈ ೨೬ರಂದು ಹತ್ಯೆ ಮಾಡಿದ ಘಟನೆಯನ್ನು ನೆನಪಿಸುತ್ತದೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಇಡೀ ಜಿಲ್ಲೆಯನ್ನು ಬೆಚ್ಚಿಬೀಳಿಸಿದ್ದು, ಪ್ರಕರಣ ವಿಚಾರಣೆ ಇನ್ನೂ ನಡೆಯುತ್ತಿದೆ. ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ೨ ದಿನ ಬಳಿಕ ಜುಲೈ ೨೮ರಂದು ಫಾಜಿಲ್‌ನ ಕೊಲೆಯಾಗಿತ್ತು. ಈ ಪ್ರಕರಣದಲ್ಲಿ ಸುಹಾಸ್ ಶೆಟ್ಟಿ ಪ್ರಮುಖ ಆರೋಪಿಯಾಗಿದ್ದನು.

Girl in a jacket
error: Content is protected !!