ಉಡುಪಿ, ಮೇ ೧೨-ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ರಾಕೇಶ್ ಪೂಜಾರಿ ಲೋಬೀಪಿಯಿಂದ ನಿಧನಹೊಂದಿದ್ದಾರೆ.
ಅವರು ಕಳೆದ ರಾತ್ರಿ ಉಡುಪಿ ಜಿಲ್ಲೆಯ ಕಾರ್ಕಳದ ನಿಟ್ಟೆ ಸಮೀಪದ ಮೆಹಂದಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಡ್ಯಾನ್ಸ್ ಮಾಡಿದ್ದರು. ನಿನ್ನೆಯಷ್ಟೇ ಕಾಂತಾರ ಪ್ರಿಕ್ವೆಲ್ ಶೂಟಿಂಗ್ನಲ್ಲಿ ಭಾಗಿಯಾಗಿದ್ದ ರಾಕೇಶ್, ಖಾಸಗಿ ಕಾರ್ಯಕ್ರಮವೊಂದರಲ್ಲಿ ನಿನ್ನೆಯೇ ಪಾಲ್ಗೊಂಡಿದ್ದರು. ಸ್ನೇಹಿತರ ಜೊತೆ ಇದ್ದಾಗ ಹೃದಯಘಾತ ಸಂಭವಿಸಿದೆ. ಲೋ ಬಿಪಿಯಿಂದ ಸಹ ಸಮಸ್ಯೆ ಕಾಣಿಸಿಕೊಂಡಿತ್ತು ಎಂಬ ಮಾಹಿತಿ ಇದೆ.
ಸುಸ್ತು ಅಂತ ಸ್ನೇಹಿತರ ಬಳಿ ಹೇಳಿದಾಗ ತಕ್ಷಣ ರಾಕೇಶ್ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಯಿತಾದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದರು ಎಂಬ ಮಾಹಿತಿಯನ್ನು ವೈದ್ಯರು ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ. ಇಂದು ಮಧ್ಯರಾತ್ರಿ ೧ ಗಂಟೆಗೆ ಇಹಲೋಕ ತ್ಯಜಿಸಿರೋ ರಾಕೇಶ್, ಕೊನೆಯದಾಗಿ ದಸ್ತಕ್ ಸಿನಿಮಾದ ಪ್ರೀಮಿಯರ್ ಶೋ ನಲ್ಲಿ ಭಾಗಿಯಾಗಿದ್ರು. ಅಲ್ಲದೇ ಇತ್ತಿಚೆಗಷ್ಟೇ ಆಕ್ಸಿಡೆಂಟ್ ಆಗಿತ್ತು, ಹೆಲ್ತ್ ಇಶ್ಯೂ ಇರಲಿಲ್ಲ ಎಂದು ತಿಳಿದು ಬಂದಿದೆ.
ಹೂಡೆ ನಿವಾಸಿಗಳಾದ ದಿನಕರ್ ಪೂಜಾರಿ ಮತ್ತು ಶಾಂಭವಿ ದಂಪತಿಗಳ ಪುತ್ರ ರಾಕೇಶ್ ಪೂಜಾರಿ. ಇವರು ತಮ್ಮ ಶಾಲಾ ಶಿಕ್ಷಣವನ್ನು ಕೆಮ್ಮಣ್ಣು ಕಾರ್ಮೆಲ್ ಹೈಸ್ಕೂಲ್ ಮತ್ತು ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜಿನಲ್ಲಿ ಪಡೆದಿದ್ದಾರೆ. ರಾಕೇಶ್ ಮಂಗಳೂರಿನ ಖಾಸಗಿ ವಾಹಿನಿಯಲ್ಲಿ ಪ್ರಸಾರವಾದ ಕಡ್ಲೆ ಬಜಿಲ್ ತುಳು ಕಾರ್ಯಕ್ರಮದಲ್ಲಿ ನಟಿಸಿದ್ದರು
’ಕಾಮಿಡಿ ಕಿಲಾಡಿಗಳು’ ಸೀಸನ್ ೩ರ ವಿಜೇತರಾಗಿ ಗಮನ ಸೆಳೆದ ರಾಕೇಶ್, ಹಾಸ್ಯಪ್ರಿಯ ವ್ಯಕ್ತಿತ್ವದಿಂದ ಅಭಿಮಾನಿಗಳ ಮನ ಗೆದ್ದಿದ್ದರು. ಕಿರುತೆರೆಯ ಜೊತೆ ಜೊತೆಗೆ ಚಿತ್ರರಂಗದಲ್ಲೂ ಅವರು ನಟನ ಚಾತುರ್ಯ ಮೆರೆದಿದ್ದರು. ಇನ್ನು ರಾಕೇಶ್ ಅವರ ಅಗಲಿಕೆ ಕನ್ನಡ ರಂಗಭೂಮಿ ಮತ್ತು ಕಿರುತೆರೆಗೆ ಭಾರಿ ನಷ್ಟವಾಗಿದೆ. ಕುಟುಂಬಸ್ಥರು, ಸ್ನೇಹಿತರು, ಅಭಿಮಾನಿಗಳು ಈ ದುಃಖದ ಸುದ್ದಿ ಕೇಳಿ ಶೋಕದಲ್ಲಿ ಮುಳುಗಿದ್ದಾರೆ. ರಾಕೇಶ್ ಪೂಜಾರಿ ಅವರ ನಿಧನದಿಂದ ಎಲ್ಲರಿಗೂ ಶಾಕ್ ಆಗಿದ್ದು, ಅದೇ ಕಾರ್ಯಕ್ರಮದಲ್ಲಿ ಜಡ್ಜ್ ಆಗಿದ್ದ ನಟಿ ರಕ್ಷಿತಾ ಪ್ರೇಮ್ ಅವರು ಕೂಡ ’ಮಿಸ್ ಯೂ ಮಗನೇ.. ನಾನು ಇನ್ಯಾವತ್ತೂ ನಿನ್ನ ಜೊತೆ ಮಾತನಾಡಲು ಆಗಲ್ಲ, ಕಾಮಿಡಿ ಕಿಲಾಡಿ ನನ್ನ ಹೃದಯಕ್ಕೆ ಹತ್ತಿರವಾದ ಕಾರ್ಯಕ್ರಮ. ನೀನು ಅದರಲ್ಲಿ ಒಂದು ಶಕ್ತಿ ಆಗಿದ್ದೆ. ನಿನ್ನಂತಹ ಅದ್ಭುತ ವ್ಯಕ್ತಿ ನಮ್ಮ ಹೃದಯಲ್ಲಿ ನೆಲೆಸಿರುತ್ತಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.