ಸ್ಥಗಿತಗೊಂಡಿದ್ದ 32ವಿಮಾನ ನಿಲ್ದಾಣಗಳು ನಾಳೆಯಿಂದ ಕಾರ್ಯಾರಂಭ

Share

ನವದೆಹಲಿ,ಮೇ14-:  ದೇಶಾದ್ಯಂತ ಮುಚ್ಚಲಾಗಿದ್ದ 32 ವಿಮಾನ ನಿಲ್ದಾಣಗಳು ನಾಳೆಯಿಂದ ಪುನರಾರಂಭಗೊಳ್ಳಲಿವೆ.

ನವದೆಹಲಿಯಲ್ಲಿ ಉನ್ನತ ಅಧಿಕಾರಿಗಳು ಮತ್ತು ಎಲ್ಲಾ ವಿಮಾನಯಾನ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದ ನಂತರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಈ ಕುರಿತು ಹೇಳಿಕೆಯನ್ನು ಬಿಡುಗಡೆ ಮಾಡಿದರು.

NOTAM ಹೊರಡಿಸಿದ ಎಲ್ಲಾ 32 ವಿಮಾನ ನಿಲ್ದಾಣಗಳಲ್ಲಿ 15 ರಿಂದ ವಿಮಾನಯಾನ ಸಂಸ್ಥೆಗಳು ತಮ್ಮ ಸಾಮಾನ್ಯ ವೇಳಾಪಟ್ಟಿಯನ್ನು ಪುನರಾರಂಭಿಸುವಂತೆ ಸೂಚಿಸಿದ್ದೇನೆ. ಈ ಸಲಹೆಗೆ ಎಲ್ಲಾ ವಿಮಾನಯಾನ ಸಂಸ್ಥೆಗಳು ಸಕಾರಾತ್ಮಕವಾಗಿ ಸ್ಪಂದಿಸಿವೆ ಎಂದು ಸಚಿವರು ಹೇಳಿದ್ದಾರೆ.
ಸದ್ಯ, ಭಾಗಶಃ ಕಾರ್ಯಾಚರಣೆಗಳು ನಡೆಯುತ್ತಿವೆ. ಪೂರ್ಣ ಪ್ರಮಾಣದ ಕಾರ್ಯಾಚರಣೆಗಳು ಮೇ 15 ರಿಂದ ಪುನರಾರಂಭಗೊಳ್ಳಲಿವೆ ಎಂದು ಸಚಿವಾಲಯದ ಮೂಲಗಳು ತಿಳಿಸಿವೆ.

ಮೇ 7 ರಂದು ಸಿಂಧೂರ್ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ಮುನ್ನೆಚ್ಚರಿಕೆ ಕ್ರಮವಾಗಿ ಮೇ 9 ರಂದು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (ಎಎಐ) ಮೇ 15 ವರೆಗೆ ಉತ್ತರ ಮತ್ತು ಪಶ್ಚಿಮ ಭಾರತದ 32 ವಿಮಾನ ನಿಲ್ದಾಣಗಳನ್ನು ಮುಚ್ಚುವ NOTAM ಅನ್ನು ಹೊರಡಿಸಿತು.

Girl in a jacket
error: Content is protected !!