ನವದೆಹಲಿ ,ಮೇ.೨೪- ಭದ್ರಾವತಿಯ ಸರ್ ಎಂ. ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ ಮತ್ತೇ ಜೀವಬಂದಿದೆ,ಕೇಂದ್ರ ಸರ್ಕಾರ ಈ ಕುರಿತು ಶೀಘ್ರ ಪುನಶ್ಚೇತನ ಕಾರ್ಯವನ್ನು ಕೈಗೊಳ್ಳಲಿದೆ.
ನವದೆಹಲಿಯಲ್ಲಿ ಕೇಂದ್ರ ಬೃಹತ್ ಕೈಗಾರಿಕಾ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಈ ವಿಷಯವನ್ನು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದು ಶೀಘ್ರ ಭದ್ರವಾತಿಯಯ ಸರ್.ಎಂ.ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಪುನಶ್ಚೇತನ ಪ್ರಯತ್ನ ನಡೆಯುತ್ತಿದ್ದು ಯನ್ನು ಪುನಶ್ಚೇತನಗೊಳಿಸುವ ಪ್ರಯತ್ನ ನಡೆಯುತ್ತಿದ್ದು, ವಿಸ್ತೃತ ಯೋಜನಾ ವರದಿ (ಡಿಪಿಆರ್) ಎರಡು ತಿಂಗಳಲ್ಲಿ ಸಿದ್ಧವಾಗಲಿದೆ ಎಂದಿದ್ದಾರೆ
ಈ ವರ್ಷಾಂತ್ಯಕ್ಕೆ ಪುನಶ್ಚೇತನ ಯೋಜನೆಯನ್ನು ಕಾರ್ಯರೂಪಕ್ಕೆ ತರಲಾಗುವುದು. ಇಡೀ ಕಾರ್ಖಾನೆಯನ್ನು ಅತ್ಯಾಧುನಿಕವಾಗಿ ನಿರ್ಮಿಸಲಾಗುವುದು. ಪ್ರಧಾನಿ ನರೇಂದ್ರ ಮೋದಿ ಅವರೇ ಈ ಯೋಜನೆಗೆ ಅಡಿಗಲ್ಲು ಹಾಕಲಿದ್ದಾರೆ ಎಂದು ಅವರು ತಿಳಿಸಿದರು.
ಸುಮಾರು ೮೦೦೦ರಿಂದ ೧೦,೦೦೦ ಕೋಟಿ ಹೂಡಿಕೆ ಮಾಡುವ ಬಗ್ಗೆ ಚಿಂತನೆ ನಡೆದಿದೆ. ಈಗಾಗಲೇ ಆ ಕಾರ್ಖಾನೆ ಭಾರತೀಯ ಉಕ್ಕು ಪ್ರಾಧಿಕಾರದ (ಎಸ್‌ಎಐಎಲ್) ಅಧೀನದಲ್ಲಿದೆ. ಮುಂದಿನ ದಿನಗಳಲ್ಲಿ ರಾಷ್ಟ್ರದಲ್ಲಿ ಉಕ್ಕು ಕ್ಷೇತ್ರದಲ್ಲಿ ಪ್ರಾಧಿಕಾರ ಒಂದು ಲಕ್ಷ ಕೋಟಿ ರು. ಮೊತ್ತ ಹೂಡಿಕೆ ಮಾಡಲಿದೆ. ಅದೇ ಸಂದರ್ಭದಲ್ಲಿ ವಿಐಎಸ್‌ಎಲ್ ಕಾರ್ಖಾನೆಯನ್ನು ಕೂಡ ಪುನಶ್ಚೇತನಗೊಳಿಸಲಾಗುವುದು ಎಂದು ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಅವರು ೨೦೩೦ರ ಹೊತ್ತಿಗೆ ದೇಶೀಯವಾಗಿ ವಾರ್ಷಿಕ ೩೦೦ ದಶಲಕ್ಷ ಟನ್ ಸ್ಟೀಲ್ ಉತ್ಪಾದನೆ ಗುರಿ ನಿಗದಿ ಮಾಡಿದ್ದು, ಅದಕ್ಕೆ ಪೂರಕವಾಗಿ ಸರಕಾರಿ ಸ್ವಾಮ್ಯದಲ್ಲಿರುವ ಉಕ್ಕು ಸ್ಥಾವರಗಳನ್ನು ಬಲಪಡಿಸುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ ಎಂದು ಅವರು ಹೇಳಿದರು.