10 ಲಕ್ಷ ರೂ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಿಬಿಎಂಪಿ ಇಂಜಿನಿಯರ್

Share

ಬೆಂಗಳೂರು, ಜೂ,18- 10 ಲಕ್ಷ ರೂ ಲಂಚ ಸ್ವೀಕರಿಸುತ್ತಿದ್ದ ಬಿಬಿಎಂಪಿ ಕಾರ್ಯಪಾಲಕ ಅಭಿಯಂತರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ

ಸಿ.ವಿ.ರಾಮನ್ ನಗರ ವಿಭಾಗದ ಕಾರ್ಯಪಾಲಕ ಅಭಿಯಂತರ ವಿ.ಯರಪ್ಪ ರೆಡ್ಡಿ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ. ಗುತ್ತಿಗೆದಾರರ ಕಡತವನ್ನು ಪರಿಶೀಲಿಸಿ ಕಳಿಸಲು 10 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಹಣ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಹಣದ ಸಹಿತ ಯರಪ್ಪ ರೆಡ್ಡಿಯನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಲೋಕಾಯುಕ್ತ ಎಸ್ ಪಿ ವಂಶಿಕೃಷ್ಣ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು.

Girl in a jacket
error: Content is protected !!