ಯೋಗರಾಜ್ ಭಟ್ ನಿರ್ದೇಶನದಲ್ಲಿ ಮೂಡಿಬಂದಿದೆ “ಮತ್ತೆ ಮೊದಲಿಂದ” ಗೀತಗುಚ್ಛ

Share

ಹೆಸರಾಂತ ನಿರ್ದೇಶಕ ಯೋಗರಾಜ್ ಭಟ್ ನಿರ್ಮಿಸಿರುವ, ಯೋಗರಾಜ್ ಭಟ್ ನಿರ್ದೇಶನದ ಹಾಗೂ ಕರಾವಳಿ ಮೂಲದ ನೂತನ ಪ್ರತಿಭೆ ಸಂಜನ್ ಕಜೆ ನಾಯಕನಾಗಿ ನಿಧಿ ಸುಬ್ಬಯ್ಯ, ಅಮೀತ ಎಸ್ ಕುಲಾಲ್, ದೇವಿಕಾ ಶಿಂಧೆ ಹಾಗೂ ಅಂಜಲಿ ಗೌಡ ನಾಯಕಿಯರಾಗಿ ನಟಿಸಿರುವ ಗೀತಗುಚ್ಛ (ಆಲ್ಬಂ) “ಮತ್ತೆ ಮೊದಲಿಂದ”. ಈ ಆಲ್ಬಂ ನಲ್ಲಿ ನಾಲ್ಕು ಹಾಡುಗಳಿದೆ. ನಾಡಿನ ಜನಪ್ರಿಯ ಗಾಯಕ – ಗಾಯಕಿಯರು ಈ ಹಾಡುಗಳನ್ನು ಹಾಡಿದ್ದಾರೆ.

ನಾಲ್ಕು ಬಣ್ಣಗಳ ಅಚ್ಚ ಕನ್ನಡ ಹಾಡುಗಳ ʼಮತ್ತೆ ಮೊದಲಿಂದʼ ಆಲ್ಬಂನ ಮೊದಲ ಹಾಡು ” ಮೋಹದ ಬಣ್ಣ ನೀಲಿ” ಇತ್ತೀಚಿನ ಸುಂದರಸಂಜೆಯಲ್ಲಿ ಬಿಡುಗಡೆಯಾಗಿದೆ. ಯೋಗರಾಜ್ ಭಟ್ ಅವರು ಬರೆದಿರುವ ಈ ಹಾಡನ್ನು ಖ್ಯಾತ ಗಾಯಕ ವಿಜಯ್ ಪ್ರಕಾಶ್ ಹಾಡಿದ್ದಾರೆ. ಅನಿರುದ್ಧ್ ಶಾಸ್ತ್ರಿ ಸಂಗೀತ ನೀಡಿದ್ದಾರೆ.

ಈ ಗೀತೆಯ ಸಂಗೀತ ನಿರ್ದೇಶಕ ಅನಿರುದ್ಧ ಶಾಸ್ತ್ರಿ ಮಾತನಾಡಿ ಯೋಗರಾಜ್‌ ಭಟ್ಟರ ಜೊತೆಗಿನ ಸಾಂಗತ್ಯದಲ್ಲಿ ಇದು ನನ್ನ ಚೊಚ್ಚಲ ಸಂಗೀತ ಸಂಯೋಜನೆ. ಇದು ನನಗೆ ತುಂಬಾ ಖುಷಿಕೊಟ್ಟಿದೆ. ಹಿರಿಯ ಮತ್ತು ಖ್ಯಾತ ಸಂಗೀತ ನಿರ್ದೇಶಕರುಗಳ ಸಂಗೀತ ಸಂಯೋಜನೆ ಈ ಆಲ್ಬಂನಲ್ಲಿದ್ದದ್ದು ನನಗೆ ಸವಾಲಿನ ವಿಷಯವಾಗಿತ್ತು ಅದನ್ನು ಸಮರ್ಪಕವಾಗಿ ನಿಭಾಹಿಸಲು ಅವರ ಮತ್ತು ಯೋಗರಾಜ್‌ ಸರ್‌ ರವರ ಸಹಕಾರ ಕಾರಣ ಎಂದು ಎಲ್ಲರನ್ನೂ ಸ್ಮರಿಸುತ್ತಾ ಧನ್ಯವಾದ ಹೇಳಿದರು

ಇನ್ನು ನಾಯಕ ನಟ ಸಂಜನ್‌ ಕಜೆ ಮಾತನಾಡಿ ನಟನಾ ಕ್ಷೇತ್ರಕ್ಕೆ ನನ್ನನ್ನು ಪರಿಚಯಿಸುತ್ತಿರುವ ಯೋಗರಾಜ್‌ ಭಟ್‌ ಸರ್‌ ರವರಿಗೆ ಅನಂತಾನಂತ ಧನ್ಯವಾದಗಳನ್ನು ಹೇಳಿ ಇಷ್ಟು ದೊಡ್ಡ ವೇದಿಕೆಯನ್ನು ಸೃಷ್ಠಿಸಿಕೊಟ್ಟಿದ್ದಕ್ಕೆ ಸದಾ ಚಿರರುಣಿಯಾಗಿರುತ್ತೇನೆ ಮುಂದೆ ಸಿನಿಮಾ ಕ್ಷೇತ್ರದಲ್ಲಿ ಯೋಗರಾಜ್‌ ಭಟ್ಟರ ಮಾರ್ಗದರ್ಶನದೊಂದಿದೆ ಪ್ರಾಮಾಣಿಕವಾಗಿ ಉತ್ತಮ ನಟನಾಗಿ ಸಿನಿ ಪ್ರಿಯರ ಮುಂದೆ ಬರುತ್ತೇನೆ, ಎಲ್ಲಾ ಸಿನಿ ರಸಿಕರ ಆಶೀರ್ವಾದ ಕೋರುತ್ತೇನೆ. ಎಂದು ಹೇಳಿ ಆಲ್ಬಂನ ಎಲ್ಲಾ ಸಂಗೀತ ನಿರ್ದೇಶಕರನ್ನು, ಗಾಯಕರನ್ನು ಸ್ಮರಿಸಿ ಧನ್ಯವಾದ ಹೇಳಿದರು.

Girl in a jacket
error: Content is protected !!