ಫವರ್ ಶೆರಿಂಗ್ ಚರ್ಚೆ-ಡಿಕೆಶಿ ಪರಮೇಶ್ ಬೇಟಿ

Share

ಬೆಂಗಳೂರು, ಜೂ, ೨೮- ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಫವರ್ ಶೇರಿಂಗ್ ವಚಾರದಲ್ಲಿ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿದ್ದು ಕಳೆದ ರಾತ್ರಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನಿವಾಸಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಭೇಟಿ ನೀಡಿ ಚರ್ಚೆ ನಡೆಸಿದ್ದು ಈ ಇಬ್ಬರ ಭೇಟಿ ವೇಳೆ ಫವರ್ ಶೇರಿಂಗ್ ಕುರಿತಂತೆ ಗಂಭೀರ ಚರ್ಚೆಗಳು ನಡೆದಿವೆ ಎನ್ನುವ ಮಾತುಗಳಿವೆ, ಮುಂದಿನ ನವೆಂಬರ್‌ನಲ್ಲಿ ನಡೆಯಬಹುದಾದ ರಾಜಕೀಯ ಬೆಳವಣಿಗೆ ಕುರಿತು ಈ ನಾಯಕರು ಚರ್ಚೆ ನಡೆಸಿದರು ಎನ್ನಲಾಗಿದೆ
ಈ ಭೇಟಿಯ ಹಿನ್ನೆಲಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿ ಕೆ ಶಿವಕುಮಾರ್ ಪರಮೇಶ್ವರ್ ಅವರು ಬಂದು ಭೇಟಿ ಮಾಡಿದ್ದು ನಿಜ, ಆದರೆ ಬೇರೆ ವಿಚಾರ ಚರ್ಚೆ ಮಾಡಿದೆವು. ಇಲ್ಲಿ ಪವರ್ ಶೇರಿಂಗ್ ವಿಚಾರ ಚರ್ಚೆ ಇಲ್ಲ. ನಾವೆಲ್ಲರೂ ಸೇರಿ ಒಟ್ಟಾಗಿ ಶಿಸ್ತಿನಿಂದ ಕೆಲಸ ಮಾಡಬೇಕು. ಇದರ ಹೊರತಾಗಿ ಬೇರೆ ಯಾವುದೇ ವಿಚಾರವಿಲ್ಲ ಎಂದು ಹೇಳಿದರು.
ಕೆಐಎಡಿಬಿ ವತಿಯಿಂದ ಶೇ.೨೦ ರಷ್ಟು ಅನುದಾನ ಸಣ್ಣ ಕೈಗಾರಿಕೆಗಳಿಗೆ ನೀಡಬೇಕು ಎಂಬ ಕಾನೂನಿದೆ. ಈ ವಿಚಾರವಾಗಿ ಎಂ.ಬಿ ಪಾಟೀಲ್ ಅವರ ಬಳಿ ಹಾಗೂ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡುತ್ತೇನೆ. ಸಣ್ಣ ಕೈಗಾರಿಕೆಗಳಿಗೆ ನಾವು ಒತ್ತು ನೀಡಬೇಕು. ಕಾರ್ಮಿಕರ ವಿಚಾರವನ್ನು ಅವರು ಪ್ರಸ್ತಾಪಿಸಿದ್ದಾರೆ. ಅದನ್ನು ಚರ್ಚೆ ಮಾಡುತ್ತೇವೆ ಎಂದು ಭರವಸೆ ನೀಡಿದರು. ಜೊತೆಗೂಡುವುದು ಆರಂಭ, ಜೊತೆಗೂಡಿ ಚರ್ಚಿಸುವುದು ಪ್ರಗತಿ, ಜೊತೆಗೂಡಿ ಕೆಲಸ ಮಾಡುವುದು ಯಶಸ್ಸು. ನೀವೆಲ್ಲರೂ ಸೇರಿ ಒಟ್ಟಾಗಿ ಕೆಲಸ ಮಾಡುತ್ತಿರುವುದರಿಂದ ಕಾಸಿಯಾ ಸಂಸ್ಥೆ ಮುಂದಿನ ಪೀಳಿಗೆಗೆ ಕೌಶಲ್ಯಾಭಿವೃದ್ಧಿ ಕೆಲಸವನ್ನು ಮಾಡುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಮಾಡದ ಕೆಲಸವನ್ನು ಕಾಸಿಯಾ ಸಂಸ್ಥೆ ಮಾಡುತ್ತಿದ್ದು, ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

Girl in a jacket
error: Content is protected !!