ತುಮಕೂರಿನಲ್ಲಿ ದಾವಣಗೆರೆ ಪಿಎಸ್‌ಐ ಆತ್ಮಹತ್ಯೆ

Share

ತುಮಕೂರು,ಜು,೦೬-ದಾವಣಗೆರೆ ನಗರದ ಬಡಾವಣೆ ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ಬಿ ಆರ್.ನಾಗರಾಜಪ್ಪ(೫೮) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಖಾಸಗಿ ಹೊಟೇಲ್‌ನಲ್ಲ ಜರುಗಿದೆ,

ಜುಲೈ ೧ರಂದು ಹೋಟೆಲ್‌ನಲ್ಲಿ ಕೊಠಡಿ ಪಡೆದಿದ್ದರು. ಇಂದು ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಹೋಟೆಲ್ ಕೋಣೆಯಿಂದ ವಾಸನೆ ಹೆಚ್ಚಿದ್ದು, ಸಿಬ್ಬಂದಿ ಹೋಗಿ ನೋಡಿದಾಗ ಆತ್ಮಹತ್ಯೆ ವಿಚಾರ ಗೊತ್ತಾಗಿದೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕೊಠಡಿಯಲ್ಲಿ ಡೆತ್‌ನೋಟ್ ಸಿಕ್ಕಿದ್ದು, ‘ನನ್ನ ಸಾವಿಗೆ ನಾನೇ ಕಾರಣ’ ಎಂದು ಉಲ್ಲೇಖಿಸಿದ್ದಾರೆ.ಜೂನ್ ೩೦ ರಂದು ಮನೆಯಿಂದ ಹೊರ ಬಂದಿದ್ದರು. ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ಜುಲೈ ೨ರಂದು ಕೆ.ಟಿ.ಜಿ ನಗರ ಪೊಲೀಸ್ ಠಾಣೆಯಲ್ಲಿ ಕಾಣೆ ಪ್ರಕರಣ ದಾಖಲಾಗಿತ್ತು. ನಾಗರಾಜಪ್ಪ ೧೯೯೩ರಲ್ಲಿ ಕಾನ್‌ಸ್ಟೇಬಲ್ ಆಗಿ ಪೊಲೀಸ್ ಇಲಾಖೆ ಸೇರಿದ್ದರು. ನಂತರ ಬಡ್ತಿ ಪಡೆದು ಈಗ ಇನ್‌ಸ್ಪೆಕ್ಟರ್ ಆಗಿ ಕೆಲಸ ಮಾಡುತ್ತಿದ್ದರು.

Girl in a jacket
error: Content is protected !!