ನಟಿ ರಮ್ಯಾಗೆ ಅಶ್ಲೀಲ ಸಂದೇಶ ರವಾನಿಸಿದ್ದ ಇಬ್ಬರ ಬಂಧನ

Share

ಬೆಂಗಳೂರು,ಆ,೦೨- ನಟಿ ರಮ್ಯಾ ವಿರುದ್ಧ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಸಂದೇಶಗಳು ಮಾಡಿದ ಸಂಬಂಧ ಇಬ್ಬರನ್ನು ಪೊಲಿಸರು ಬಂಧಿಸಿದ್ದಾರೆ.
ರಮ್ಯಾ ಅವರಿಗೆ ಸಮಾಜಿಕ ಜಾಲ ತಾಣಗಳಲ್ಲಿ ಅಶ್ಲೀಲ ಸಂದೇಶಗಳನ್ನರು ರವಾನಿಸದವರೆಲ್ಲರೂ ದರ್ಶನ್ ಅಭಿಮಾನಿಗಳು ಎಂದು ಹೇಳಲಾಗಿತ್ತು ಸೈಬರ್ ಪೊಲೀಸರು ನಟಿ ರಮ್ಯಾ ನೀಡಿದ ದೂರಿನ ಆಧಾರದ ಮೇಲೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ರವಾನಿಸಿದ ಇಬ್ಬರನ್ನು ಬಂಧಿಸಿದ್ದಾರೆ.

ರಮ್ಯಾ ಅವರು ಇತ್ತೀಚೆಗೆ ರೇಣುಕಾಸ್ವಾಮಿ ಪರ ಮಾತನಾಡಿದ್ದರು. ಸುಪ್ರೀಂ ಕೋರ್ಟ್‌ನಲ್ಲಿ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯುವಾಗ ‘ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗೋ ಭರವಸೆ ಇದೆ’ ಎಂದಿದ್ದರು. ಇದು ದರ್ಶನ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣ ಆಗಿತ್ತು. ದರ್ಶನ್ ಫ್ಯಾನ್ಸ್ ರಮ್ಯಾ ಅವರ ಸೋಶಿಯಲ್ ಮೀಡಿಯಾ ಪೋಸ್ಟ್‌ಗಳ ಕಮೆಂಟ್ ಬಾಕ್ಸ್‌ನಲ್ಲಿ ಅಶ್ಲೀಲ ಕಮೆಂಟ್‌ಗಳನ್ನು ಮಾಡಿದ್ದರು.
ಇಷ್ಟಕ್ಕೆ ನಿಲ್ಲಿಸದೆ ರಮ್ಯಾಗೆ ಕೆಟ್ಟ ಕೆಟ್ಟ ಮೆಸೇಜ್?ಗಳನ್ನು ಕಳುಹಿಸಿದ್ದರು. ಇದನ್ನು ಸಹಿಸಿಕೊಳ್ಳದ ರಮ್ಯಾ ಅವರು ಹೋಗಿ ಸೈಬರ್ ಠಾಣೆಗೆ ದೂರು ದಾಖಲು ಮಾಡಿದ್ದರು. ಈ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿದ ಸಿಸಿಬಿ ಸೈಬರ್ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಓರ್ವ, ಚಿತ್ರದುರ್ಗ ಮೂಲದ ಓರ್ವನ ಬಂಧನ ಆಗಿದೆ.
ಈ ಪ್ರಕರಣಕ್ಕೆ ಇಲ್ಲಿಗೆ ನಿಲ್ಲುವುದಿಲ್ಲ. ಈ ಪ್ರಕರಣದಲ್ಲಿ ಇನ್ನೂ ಹೆಸರು ದಾಖಲಾಗಿದೆ. ಅವರ ಹುಡುಕಾಟ ನಡೆಯುತ್ತಿದೆ. ಹೀಗಾಗಿ, ಅನೇಕರಿಗೆ ನಡುಕ ಶುರುವಾಗಿದೆ. ಈ ಪ್ರಕರಣದಲ್ಲಿ ಕೇಸ್ ಆದರೆ ಅಭಿಮಾನಿ ತೋರಿಸಲು ಹೋದವರು ಕೋರ್ಟ್?ಗೆ ಅಲೆಯುವ ಪರಿಸ್ಥಿತಿ ನಿರ್ಮಾಣ ಆಗಲಿದೆ.

Girl in a jacket
error: Content is protected !!