ಬೀದರ್, ಅ,14-ನವೆಂಬರ್ ನಲ್ಲಿ ಕೇಂದ್ರ ಸರ್ಕಾರದಲ್ಲಿ ಕ್ರಾಂತತಿಯಾಗಲಿದ್ದು,ನಿತನ್ ಗಡ್ಕರಿ ಪ್ರಧಾನಮಂತ್ರಿಯಾಗಲಿದ್ದಾರೆ ಎಂದು ಕಾರ್ಮಿಕ ಸಚಿವ
ಸಂತೋಷ್ ಲಾಡ್ ಹೊಸ ಬಾಂಬ್ ಸಿಡಿಸಿದ್ದಾರೆ.
ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು ನಮಗೂ ಕೇಂದ್ರದ ʻನವಂಬರ್ ಕ್ರಾಂತಿʼ ಬಗ್ಗೆ ಕುತೂಹಲವಿದೆ. ನಿತಿನ್ ಗಡ್ಕರಿ ಅವರು ಪ್ರಧಾನಿ ಆಗ್ತಾರೆ ಅನ್ನೋ ಮಾಹಿತಿ ಇದೆ. ಇನ್ನು ನಿನ್ನೆಯ ಡಿನ್ನರ್ ಮೀಟಿಂಗ್ ನಲ್ಲಿ ಸಂಪುಟ ಪುನರ್ ರಚನೆ ಬಗ್ಗೆ ಯಾವುದೇ ಚರ್ಚೆಗಳಾಗಿಲ್ಲ ಎಲ್ಲಾ ಉಹಾ ಪೋಹಗಳಷ್ಟೆ. ಸಂಪುಟ ಪುನರ್‌ರಚನೆ ಮಾಡುವುದಾದರೆ ಸಿಎಂ ಡಿಸಿಎಂಗೆ ಪೂರ್ಣ ಅಧಿಕಾರ ಇದೆ ಎಂದರು.
ಆರ್ ಎಸ್ ಎಸ್ ಗೆ ಮಾತ್ರ ದೇಶಪ್ರೇಮವಲ್ಲ ಎಲ್ಲರಿಗೂ ದೇಶಪ್ರೇಮವಿದೆ. 145 ಕೋಟಿ ಭಾರತೀಯರೂ ದೇಶ ಪ್ರೇಮಿಗಳೇ ಆರ್‌ಎಸ್ ಎಸ್ ಗೆ ವಿಶೇಷವಾಗಿ ದೇಶ ಪ್ರೇಮ ಇಲ್ಲ ಎಂದು ಸಚಿವ ಸಂತೋಷ್ ಲಾಡ್ ಟೀಕಿಸಿದರು