ಬೆಂಗಳೂರು, ಮೇ 10; ಇಂದಿನಿಂದ ಬೆಂಗಳೂರಿನ ಕೆ.ಸಿ.ಜನರಲ್, ಜಯನಗರ ಜನರಲ್, ಸರ್ ಸಿ.ವಿ.ರಾಮನ್ ಜನರಲ್, ಇಎಸ್ಐ ಮತ್ತು ನಿಮ್ಹಾನ್ಸ್ ಆಸ್ಪತ್ರೆಗಳಲ್ಲಿ ಹಾಗೂ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 18-44 ವರ್ಷ ವಯೋಮಾನದವರಿಗೆ ಕೋವಿಡ್-19 ಲಸಿಕೆ ವಿತರಿಸಲಾಗುವುದು
ಇತರೆ ಜಿಲ್ಲೆಗಳಲ್ಲಿ ಆರಂಭಿಕವಾಗಿ ಜಿಲ್ಲಾಸ್ಪತ್ರೆಗಳು, ತಾಲ್ಲೂಕು ಆಸ್ಪತ್ರೆಗಳು ಹಾಗೂ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 18-44 ವರ್ಷ ವಯೋಮಾನದವರಿಗೆ ಲಸಿಕೆ ವಿತರಣೆ ಮಾಡಲಾಗುವುದು
18-44 ವರ್ಷ ವಯೋಮಾನದವರಿಗೆ ಲಸಿಕೆ ವಿತರಿಸುವ ಎಲ್ಲ ಕೇಂದ್ರಗಳಲ್ಲಿ ಈ ಗುಂಪಿನವರಿಗೆ ಪ್ರತ್ಯೇಕ ಸ್ಥಳ ಗುರುತಿಸಲಾಗಿವುದು.
ಕೋವಿನ್ ಅಥವಾ ಆರೋಗ್ಯ ಸೇತು ಆಪ್ ಮೂಲಕ ನೋಂದಣಿ ಮಾಡಿಸಿ, ಸಮಯ ನಿಗದಿ ಮಾಡಿಕೊಂಡಿರುವವರಿಗೆ ಮಾತ್ರ ಲಸಿಕೆ ನೀಡಲಾಗುವುದು. ನೋಂದಣಿ ಇಲ್ಲದೆ ನೇರವಾಗಿ ಲಸಿಕಾ ಕೇಂದ್ರಕ್ಕೆ ಬರುವವರಿಗೆ ಅವಕಾಶವಿರುವುದಿಲ್ಲ