ಕೆ.ಬಿ. ಶಾಣಪ್ಪ ನಿಧನಕ್ಕೆ ಡಿ.ಕೆ. ಶಿವಕುಮಾರ್ ಸಂತಾಪ

Share

ಬೆಂಗಳೂರು,10:ಮಾಜಿ ಸಚಿವ ಕೆ.ಬಿ. ಶಾಣಪ್ಪ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

‘ಜನಪರ ಹೋರಾಟಗಾರ, ಮಾಜಿ ಸಂಸದರು, ಮಾಜಿ ಸಚಿವರಾಗಿದ್ದ ಕೆ.ಬಿ ಶಾಣಪ್ಪ ಅವರ ನಿಧನದ ಸುದ್ದಿ ಕೇಳಿ ಆಘಾತವಾಗಿದೆ.

ಅವರು ಹಿರಿಯ ನಾಯಕರು, ಹೈದರಾಬಾದ್ ಕರ್ನಾಟಕ ಭಾಗದ ಜನರ ಧ್ವನಿಯಾಗಿ ಕೆಲಸ ಮಾಡಿದವರು. ಆ ಭಾಗದ ನಾನಾ ಅಭಿವೃದ್ಧಿ ಕಾರ್ಯಗಳ ಹಿಂದೆ ಶಾಣಪ್ಪನವರ ಹೋರಾಟದ ಪರಿಶ್ರಮವಿದೆ. ಕಾರ್ಮಿಕರು ಹಾಗೂ ಶೋಷಿತ ವರ್ಗದ ಹಿತಕ್ಕಾಗಿ ಅವಿರತ ಶ್ರಮಿಸಿದ ನಾಯಕರು ಎಂದು ಶಿವಕುಮಾರ್ ಅವರು ಸ್ಮರಿಸಿದ್ದಾರೆ.

ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಅವರ ಕುಟುಂಬ ಸದಸ್ಯರು, ಅಭಿಮಾನಿ ಬಳಗಕ್ಕೆ ಆ ಭಗವಂತ ನೀಡಲಿ’ ಎಂದು ಶಿವಕುಮಾರ್ ಅವರು ತಮ್ಮ ಶೋಕಸಂದೇಶದಲ್ಲಿ ತಿಳಿಸಿದ್ದಾರೆ.

Girl in a jacket
error: Content is protected !!