ಟಫ್ ಲಾಕ್ಡೌನ್ : ಹೊರಬಂದವರಿಗೆ ಲಾಠಿ ರುಚಿ, ವಾಹನ ಸೀಜ್ !

Share

ಬೆಂಗಳೂರು, 10: ಇಂದಿನಿಂದ ಮೇ 24ರವರೆಗೆ ರಾಜ್ಯದಲ್ಲಿ ಕಂಪ್ಲೀಟ್ ಲಾಕ್ ಡೌನ್ ಜಾರಿಯಲ್ಲಿರಲಿದ್ದು, ಮೊದಲ ದಿನವಾದ ಇಂದು ಬೆಳ್ಳಂಬೆಳಗ್ಗೆ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದಾರೆ.
ಕುಂಟುನೆಪಗಳನ್ನು ಹೇಳಿ ಓಡಾಟ ನಡೆಸುವವರ ಮೇಲೆ ಪೊಲೀಸರು ಹಲವೆಡೆ ಲಾಠಿ ಏಟು ಬೀಸಿದ್ದಾರೆ. ಜತೆಗೆ ವಾಹನಗಳನ್ನು ವಶಪಡಿಸಿಕೊಂಡು ಸೀಜ್ ಮಾಡಿದ್ದಾರೆ.
ನಿಯಮ ಉಲ್ಲಂಘಿಸಿ ಅನಗತ್ಯವಾಗಿ ಓಡಾಟ ನಡೆಸಿದವರ ಮೇಲೆ ಕ್ರಮ ಕೈಗೊಳ್ಳಲಾಗುತ್ತಿದೆ. ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅನಗತ್ಯ ಸಂಚಾರ ನಡೆಸಿದವರ ವಾಹನಗಳನ್ನು ಸೀಜ್ ಮಾಡಲಾಗುತ್ತಿದೆ.
ಗದಗ, ಬಾಗಲಕೋಟೆ, ಕೋಲಾರ, ತುಮಕೂರು, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕಟ್ಟುನಿಟ್ಟಾಗಿ ಲಾಕ್ ಡೌನ್ ಜಾರಿಯಾಗಿದೆ.

Girl in a jacket
error: Content is protected !!