ಬೆಂಗಳೂರು,ಮೇ,13: ಚಾಮರಾಜನಗರ ಆಸ್ಪತರೆಯಲ್ಲಿ ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿದವರು24 ಮಂದಿಯಲ್ಲ 36 ಮಂದಿ ಎಂದು ಸಮಿತಿ ಹೈಕೋರ್ಟ್ ಗೆ ವರದಿ ಸಲ್ಲಿಸಿದೆ. ನ್ಯಾ.ಎ.ಎನ್.ವೇಣುಗೋಪಾಲಗೌಡ ನೇತೃತ್ವದ ಸಮಿತಿ ಮೇ 2ರ ರಾತ್ರಿ 10.30ರಿಂದ ತಡರಾತ್ರಿ 2.30ರವರೆಗೆ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಮಸ್ಯೆ ಉಂಟಾಗಿತ್ತು. ಈ 4 ಗಂಟೆಗಳ ಅವಧಿಯಲ್ಲಿ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳ ಚಿಕಿತ್ಸೆಗಾಗಿ ಆಕ್ಸಿಜನ್ ಇರಲಿಲ್ಲ ಎಂದು ವರದಿಯಲ್ಲಿ ಸ್ಪಷ್ಟವಾಗಿ ತಿಳಿಸಿದೆ.
ಆಡಿಟ್ ವರದಿ ಪ್ರಕಾರ ಆಕ್ಸಿಜನ್ ಕೊರತೆಯಿಂದ ಮೂವರು ಸಾವನ್ನಪ್ಪಿದ್ದಾರೆ. ಮೆದುಳಿನ ಆಘಾತದಿಂದ 7 ರೋಗಿಗಳು ಮೃತಪಟ್ಟಿದ್ದಾರೆ. ಕೊರೊನಾ ಸೋಂಕಿನಿಂದ 14 ಸಾವಾಗಿದೆ ಎಂದು ಆಡಿಟ್ ವರದಿಯಲ್ಲಿ ತಿಳಿಸಲಾಗಿದೆ. ಆದರೆ ಇವರೆಲ್ಲರಿಗೂ ಆಕ್ಸಿಜನ್ ಕೊರತೆ ಆಗಿದ್ದು ನಿಜ. ಆಕ್ಸಿಜನ್ ಕೊರತೆಯಾದ ನಂತರ 36 ಒಳರೋಗಿಗಳು ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಸಮಿತಿ ಹೈಕೋರ್ಟ್ಗೆ ವರದಿಯಲ್ಲಿ ಹೇಳಿದೆ.
ಚಾಮರಾಜನಗರದಲ್ಲಿ ಆಕ್ಸಿಜನ್ ಕೊರತೆಯಿಂದ ಜನರ ಸಾವು ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡುವ ಬಗ್ಗೆ ನಿರ್ಧರಿಸಿ ಮತ್ತು
ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಕಳ್ಳಬಟ್ಟಿ ದುರಂತಕ್ಕೂ ಪರಿಹಾರ ಕೊಟ್ಟಿದ್ದೀರಿ. ಹೀಗಾಗಿ ಈ ಪ್ರಕರಣದಲ್ಲಿ ಪರಿಹಾರ ನೀಡಲು ಹಿಂಜರಿಕೆ ಸರಿಯಲ್ಲ ಎಂದ
ಹೈಕೋರ್ಟ್ ವಿಭಾಗೀಯ ಪೀಠ, ಪರಿಹಾರ ನೀಡುವ ಬಗ್ಗೆ ಪ್ರತಿಕ್ರಿಯಿಸಲು ಸರ್ಕಾರಕ್ಕೆ ಸೂಚನೆ ಸರ್ಕಾರಕ್ಕೆ ತಿಳಿಸಿದೆ.