ಗೃಹ ಸಚಿವ ಬೊಮ್ಮಾಯಿ ನಿವಾಸ ಕೋವಿಡ್ ಆರೈಕೆ ಕೇಂದ್ರ

Share

 

ಶಿಗ್ಗಾವಿ,ಮೇ,13:
ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾವಿಯಲ್ಲಿರುವ ತಮ್ಮ ಮನೆಯ ಆವರಣವನ್ನು ಈಗ ಕೋವಿಡ್ ಆರೈಕೆ ಕೇಂದ್ರವಾಗಿ ಪರಿವರ್ತಿಸಿದ್ದಾರೆ.

ಶಿಗ್ಗಾವಿ ಕ್ಷೇತ್ರದ ಕೋವಿಡ್ ಸೋಂಕಿತರ ಜೀವ ರಕ್ಷಣೆಗೆ ಬೊಮ್ಮಾಯಿ ಪಣ ತೊಟ್ಟಿದ್ದಾರೆ. ಸೋಂಕು ಕಾಣಿಸಿಕೊಂಡ ವ್ಯಕ್ತಿಗೆ ಪ್ರಾಥಮಿಕ ವೈದ್ಯೋಪಚಾರ ಒದಗಿಸಲು ಶಿಗ್ಗಾವಿಯಲ್ಲಿ ಇರುವ ತಮ್ಮ ಮನೆಯನ್ನು ಕೋವಿಡ್ ಅರೈಕೆ ಕೇಂದ್ರವನ್ನಾಗಿ ಪರಿವರ್ತಿಸಿದ್ದಾರೆ. ಚಿಕಿತ್ಸೆ ನೀಡಲು ವೈದ್ಯರನ್ನು ನಿಯೋಜಿಸಲಾಗಿದೆ. 50 ಹಾಸಿಗೆ ಗಳನ್ನು ಇಲ್ಲಿ ಅಳವಡಿಸಲಾಗಿದೆ.

ಈ ಸ್ಥಳಕ್ಕೆ ಸಚಿವ ಬೊಮ್ಮಾಯಿ ಗುರುವಾರ ಭೇಟಿ ನೀಡಿ ಅಲ್ಲಿನ ಸಿದ್ಧತೆಗಳನ್ನು ಪರಿಶೀಲಿಸಿದರು.

೨೫ ಆಕ್ಸಿಜನ್ ಕಾನ್ಸಂಟ್ರೇಟರ್ ವಿತರಣೆ

ಉಸಿರಾಟದ ಸಮಸ್ಯೆಯಿಂದ ಬಳಲುವ ಕೋವಿಡ್ ಸೋಂಕಿತರ ಪ್ರಾಣ ಕಾಪಾಡುವ 25 ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ಶಿಗ್ಗಾವಿ ಸಾರ್ವಜನಿಕ ಆಸ್ಪತ್ರೆಗೆ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ್ ಬೊಮ್ಮಾಯಿ ಹಸ್ತಾಂತರಿಸಿದರು.

ಗುರುವಾರ ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಕೋವಿಡ್ ಸ್ಥಿತಿಗತಿ ಮತ್ತು ತಾಲೂಕು ಆಸ್ಪತ್ರೆಯಲ್ಲಿ ಮಾಡಲಾದ ವ್ಯವಸ್ಥೆಗಳ ಕುರಿತು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಅವರು ಆಕ್ಸಿಜನ್ ಕನ್ಸೆಂಟ್ರೇಟರ್ ಗಳನ್ನು _ಶಿಗ್ಗಾವಿ ತಾಲೂಕು ವೈದ್ಯಾಧಿಕಾರಿಗಳಿಗೆ ಸಾಂಕೇತಿಕವಾಗಿ ಹಸ್ತಾಂತರಿಸಿದರು.

ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಹೀಗಾಗಿ ಆಸ್ಪತ್ರೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬೆಡ್ ಗಳನ್ನು ಸಿದ್ದಪಡಿಸಬೇಕಾಗಿದೆ. ಆದ್ದರಿಂದ ಶಿಗ್ಗಾವಿ ತಾಲೂಕು ಆಸ್ಪತ್ರೆಯಲ್ಲಿ ತಕ್ಷಣ 46 ಹೆಚ್ಚುವರಿ ಬೆಡ್ ಗಳನ್ನು ಸಿದ್ಧಪಡಿಸುವಂತೆ ಬಸವರಾಜ್ ಬೊಮ್ಮಾಯಿ ಸೂಚಿಸಿದರು.

Girl in a jacket
error: Content is protected !!