ಕೋವಿಡ್ ನಿಂದ ಮೃತಪಟ್ಟ ಕುಟುಂಬಕ್ಕೆ 50 ಸಾವಿರ ಪರಿಹಾರ:ಬಿ.ಸಿ.ಪಾಟೀಲ್

Share

ಬೆಂಗಳೂರು,ಮೇ.16 :ಹಿರೇಕರೂರು ಮತಕ್ಷೇತ್ರದಹಿರೇಕೆರೂರು ಹಾಗೂ ರಟ್ಟಿಹಳ್ಳಿ ತಾಲೂಕಿನ ವ್ಯಾಪ್ತಿಯಲ್ಲಿ ಕೋವಿಡ್ ಎರಡನೇ ಅಲೆ ಸೋಂಕಿನಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 50ಸಾವಿರ ರೂ.ಪರಿಹಾರ ಧನ ನೀಡುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಘೋಷಿಸಿದ್ದಾರೆ.

ಹಿರೇಕೆರೂರು ಮತಕ್ಷೇತ್ರದಲ್ಲಿ ಇಲ್ಲಿಯವರೆಗೆ ಸುಮಾರು ಹದಿನೆಂಟು ಮಂದಿ‌ ಸೋಂಕಿನಿಂದ ಮೃತಪಟ್ಟಿದ್ದು,ಮೃತಪಟ್ಟವರ ಕುಟುಂಬದ ಸದಸ್ಯರನ್ನು ನಾಳೆ ಬಿ.ಸಿ.ಪಾಟೀಲ್ ಭೇಟಿಯಾಗಿ ಪರಿಹಾರ ಧನ ವಿತರಿಸಲಿದ್ದಾರೆ.

ಇನ್ನು ಕೆಲವು ದಿನಗಳ ಹಿಂದೆ ಹಿರೇಕೆರೂರು ಮತಕ್ಷೇತ್ರ ವ್ಯಾಪ್ತಿಯಲ್ಲಿನ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ಸದಸ್ಯರು ಹಿರೇಕೆರೂರು ಸೇರಿದಂತೆ ಹಾವೇರಿ ಜಿಲ್ಲೆಯ ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿಗೆ ದಾಖಲಾಗಿ ಚಿಕಿತ್ಸೆ ಪಡೆದಲ್ಲಿ ಅವರ ಚಿಕಿತ್ಸಾ ವೆಚ್ಚವನ್ನು ವೈಯಕ್ತಿಕವಾಗಿ ಭರಿಸುವುದಾಗಿ ಅವರು ತಿಳಿದಿದ್ದಾರೆ.

Girl in a jacket
error: Content is protected !!