ಹತ್ತನೇ,ಪಿಯು ಪರೀಕ್ಷೆಗಳ ರದ್ದತಿಗೆ ತೀರ್ಮಾನಿಸಿಲ್ಲ-ಸುರೇಶ್‌ಕುಮಾರ್

Share

ಬೆಂಗಳೂರು,ಮೇ,೧೭: ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯು ಪರೀಕ್ಷೆಗಳನ್ನು ರದ್ದುಪಡಿಸುವ ಬಗ್ಗೆ ಸದ್ಯ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಈಗಾಗಲೇ ಎಸ್‌ಎಸ್‌ಎಲ್ಸಿ, ದ್ವಿತೀಯ ಪಿಯು ಪರೀಕ್ಷೆಗಳನ್ನು ಮುಂದೂಡಲಾಗಿದೆ. ಈ ಹಿನ್ನೆಲೆಯಲ್ಲಿ ಮುಂದೂಡಲಾಗಿರುವ ಪರೀಕ್ಷೆಗಳನ್ನು ರದ್ದು ಪಡಿಸುವ ಬಗ್ಗೆ ಸದ್ಯಕ್ಕೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು  ಹೇಳಿದರು
ಕೆಲವೆಡೆ ಪರೀಕ್ಷೆ ರದ್ದು ಮಾಡುವ ಬಗ್ಗೆ ಊಹಾಪೋಹವಾಗಿದ್ದು, ವಿದ್ಯಾರ್ಥಿಗಳ ಭವಿಷ್ಯ ಹಾಗೂ ಯೋಗಕ್ಷೇಮವನ್ನು ಗಮನದಲ್ಲಿರಿಸಿ ಮುಂದಿನ ದಿನಗಳಲ್ಲಿ ಅವರ ಒಳಿತಿಗೆ ಪೂರಕವಾದ ನಿರ್ಣಯ ತೆಗೆದುಕೊಳ್ಳಲಾಗುವುದು. ಯಾವುದೇ ಕಾರಣಕ್ಕೂ ವಿಚಲಿತರಾಗದೇ ವಿದ್ಯಾರ್ಥಿಗಳು ಓದಿನಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ

Girl in a jacket
error: Content is protected !!