ಇಂದಿರಾ ಕ್ಯಾಂಟೀನ್ ಮುಂದೆ ಜನರೇ ಇಲ್ಲ ೬ ಲಕ್ಷ ಲೆಕ್ಕ ಹೇಗೆ-ಎಚ್‌ಡಿಕೆ

Share

ಬೆಂಗಳೂರು, ಮೇ ,೨೦: ಇಂದಿರಾ ಕ್ಯಾಂಟೀನ್‌ಲ್ಲಿ ಅಹಾರ ಪಡೆಯಲು ಜನರೇ ಇಲ್ಲ ಆದರೆ ನಿತ್ಯ ೬ ಲಕ್ಷ ಮಂದಿ ಇಂದಿರಾ ಕ್ಯಾಂಟೀನ್‌ನಲ್ಲಿ ಅಹಾರ ಪಡೆಯುತ್ತಿದ್ದಾರೆ ಎನ್ನುವ ಮೂಲಕ ಸರ್ಕಾರ ಸುಳ್ಳು ಲೆಕ್ಕ ಕೊಟ್ಟಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ನಿತ್ಯ ೬ ಲಕ್ಷ ಮಂದಿ ಇಂದಿರಾ ಕ್ಯಾಂಟೀನ್‌ಗಳಲ್ಲಿ ಆಹಾರ ಪಡೆಯುತ್ತಿರುವುದಾಗಿ ಹೇಳಲಾಗಿದೆ. ಇಂದಿರಾ ಕ್ಯಾಂಟೀನ್‌ಗಳ ಎದುರು ಜನರೇ ಇಲ್ಲ. ಆದರೆ, ಪ್ರತಿ ದಿನ ೬ ಲಕ್ಷ ಜನರ ಲೆಕ್ಕ ಕೊಟ್ಟು ಸರ್ಕಾರ ಯಾವ ಗುತ್ತಿಗೆದಾರನನ್ನು ಉದ್ದಾರ ಮಾಡುತ್ತಿದೆ”-ಎಂದಿದ್ದಾರೆ.
“ಕ್ಯಾಂಟೀನ್‌ಗಳ ಎದುರು ಇರುವ ಜನಸಂದಣಿಯನ್ನು ಸರ್ಕಾರ ವಿಡಿಯೊ ಮಾಡಿ ಬಿಡುಗಡೆ ಮಾಡಬಲ್ಲದೇ?” ಎಂದು ಕುಮಾರಸ್ವಾಮಿಯವರು ಟ್ವೀಟ್ ಮೂಲಕ ಸರಕಾರಕ್ಕೆ ಸವಾಲು ಎಸೆದಿದ್ದಾರೆ.
ಜನಹಿತದ ಲಾಕ್ ಡೌನ್ ಮತ್ತು ಪರಿಹಾರ ಪ್ಯಾಕೇಜ್ ಘೋಷಿಸಬೇಕು ಎನ್ನುವ ಜೆಡಿಎಸ್ ಒತ್ತಾಯದ ನಂತರ ಸರಕಾರ ಈ ಪ್ಯಾಕೇಜ್ ಅನ್ನು ಘೋಷಿಸಿದೆ. ಆದರೆ, ಕರ್ನಾಟಕದಂತಹ ದೊಡ್ಡ ರಾಜ್ಯಕ್ಕೆ ಈ ಪ್ಯಾಕೇಜ್ ಏನೇನೂ ಸಾಲದು ಎಂದು ಎಚ್ಡಿಕೆ ಅಭಿಪ್ರಾಯ ಪಟ್ಟಿದ್ದಾರೆ.
ವಿಶೇಷ ಪ್ಯಾಕೇಜ್‌ನಲ್ಲಿ ಇಂದಿರಾ ಕ್ಯಾಂಟೀನ್ ನಲ್ಲಿ ನೀಡಲಾಗುತ್ತಿರುವ ಉಚಿತ ಊಟದ ವ್ಯವಸ್ಥೆಯನ್ನೂ ಸೇರಿಸಲಾಗಿದೆ. ಅದರಲ್ಲಿ ಆರು ಲಕ್ಷಕ್ಕೂ ಹೆಚ್ಚು ಜನರಿಗೆ ಊಟದ ವ್ಯವಸ್ಥೆ ಎಂದು ಸರಕಾರ ಹೇಳಿತ್ತು.

Girl in a jacket
error: Content is protected !!