ದೇಶದಲ್ಲಿ ಇಳಿಕೆ ಕಂಡ ಕೊರೊನಾ ಪ್ರಕರಣ

Share

ನವದೆಹಲಿ, ಮೇ,26: ಕೋವಿಡ್ ನಿರ್ವಹಣೆಗೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ತಗೆದುಕೊಂಡಿರುವ ಕಠಿಣ ಕ್ರಮ ಕೈಗೊಂಡಿರುವ ಕಾರಣ ಈಗ ಕೊರೊನಾ ಸೋಂಕಿತರ ಪ್ರಮಾಣ ಇಳಿಕೆಯಾಗಿದ್ದು ಕಳೆದ 24 ಗಂಟೆಯಲ್ಲಿ 2,08,92 ಮಂದಿಗೆ ಸೋಂಕು ದೃಢಪಟ್ಟಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,08,921 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,71,57,795 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 4,157 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಮೂಲಕ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 3,11,388 ಕ್ಕೆ ಏರಿಕಯಾಗಿದೆ.
ದೇಶದಲ್ಲಿ ಕೊರೊನಾ 2 ನೇ ಅಲೆಯಲ್ಲಿ ಈವರೆಗೆ 513,
ಇನ್ನು ಕಳೆದ 24 ಗಂಟೆಯಲ್ಲಿ 2,95,955 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಈವರೆಗೆ 2,43,50,816 ಸೋಂಕಿತರು ಕೊರೊನಾದಿಂದ ಗುಣಮುಖರಾಗಿದ್ದು, ಸದ್ಯ ದೇಶದಲ್ಲಿ 24,95,591 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

Girl in a jacket
error: Content is protected !!