ಬೆಂಗಳೂರು, ಮೇ ೨೭: ಜಿಂದಾಲ್ ಕಂಪನಿಗೆ ನೀಡಲಾಗಿದ್ದ ಭೂಮಿಯನ್ನು ರಾಜ್ಯ ಸರ್ಕಾರ ವಾಪಾಸ್ ಪಡೆಯಲು ಇಂದು ನಡೆದ ಸಚಿವ ಸಂಪುಟದಲ್ಲಿ ನಿರ್ಧರಿಸಲಾಗಿದೆ.
ಬಳ್ಳಾರಿಯ ಜಿಂದಾಲ್ ಕಂಪನಿಗೆ ೩,೬೬೭ ಎಕರೆ ಭೂಮಿಯನ್ನು ಮಾರಾಟ ಮಾಡಿತ್ತು, ಆದರೆ ಇದಕ್ಕೆ ಸಾಕಷ್ಟು ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಭೂಮಿಯನ್ನು ಹಿಂಪಡೆಯುವ ನಿರ್ಧಾರಕ್ಕೆ ಸರ್ಕಾರ ಬಂದಿದೆ.
ಈ ಸಂಸ್ಥೆಯಿಂದ ರಾಜ್ಯ ಸರ್ಕಾರಕ್ಕೆ ೧೦೭೮ ಕೋಟಿ ರೂ.ಗಳ ರಾಜಧನ ಬರಬೇಕಾಗಿದೆ ಎಂದು ತಿಳಿದುಬಂದಿದೆ, ಈ ಕುರಿತು ಹೈಕೋರ್ಟ್ , ಸುಪ್ರೀಂಕೋರ್ಟ್ ಮತ್ತು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದಲ್ಲಿ ಅರ್ಜಿ ಸಲ್ಲಿಸಲಾಗಿದೆ.
ಜಿಂದಾಲ್ ಕಂಪನಿಗೆ ೩,೬೬೭ ಎಕರೆ ಭೂಮಿಯನ್ನು ರಾಜ್ಯ ಸರ್ಕಾರು ಕೆಲವು ತಿಂಗಳುಗಳ ಹಿಂದಷ್ಟೇ ಹಸ್ತಾಂತರ ಮಾಡಿತ್ತು. ಸರ್ಕಾರಿ ಜಮೀನನ್ನು ಖಾಸಗಿ ಕಂಪನಿಗೆ ನೀಡಿರುವ ಕುರಿತು ಸಾಕಷ್ಟು ವಿರೋಧಗಳು ಕೇಳಿಬಂದಿತ್ತು. ಇದೀಗ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಿ ನೀಡಿದ್ದ ಜಮೀನನ್ನು ಹಿಂಪಡೆಯುವ ನಿರ್ಧಾರಕ್ಕೆ ಬರಲಾಗಿದೆ.
ಜಿಂದಾಲ್‌ಗೆ ನೀಡಿದ್ದ ಭೂಮಿ ವಾಪಾಸ್
Share