ಹಾವೇರಿಯ ಜಂಗಮನಕೊಪ್ಪದಲ್ಲಿ ಹಾಲು ಸಂಸ್ಕರಣಾ ಡೇರಿ ಸ್ಥಾಪನೆಗೆ ಸರ್ಕಾರದ ಒಪ್ಪಿಗೆ;ಬೊಮ್ಮಾಯಿ

Share

ಬೆಂಗಳೂರುು,ಮೇ,27:ಧಾರವಾಡ ಹಾಲು ಒಕ್ಕೂಟದ ವತಿಯಿಂದ ಹಾವೇರಿ ಜಿಲ್ಲೆಯ ಜಂಗಮನಕೊಪ್ಪ ಗ್ರಾಮದಲ್ಲಿ 1 ಲಕ್ಷ ಲೀಟರ್ ಸಾಮರ್ಥ್ಯದ ಹಾಲು ಸಂಸ್ಕರಣಾ ಡೇರಿ ಹಾಗೂ ಅಲ್ಟ್ರಾ ಹೀಟ್ ಟ್ರೀಟ್ಮೆಂಟ್ ಪ್ಯಾಕಿಂಗ್ ಘಟಕವನ್ನು 90 ಕೋಟಿ ರೂಪಾಯಿ ವೆಚ್ಚದಲ್ಲಿ (ಪಿಪಿಪಿ) ಖಾಸಗಿ ಸಹಭಾಗಿತ್ವದಲ್ಲಿ ಅನುಷ್ಠಾನಗೊಳಿಸುವ ಮಹತ್ವಾಕಾಂಕ್ಷಿ ಯೋಜನೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ ಎಂದು  ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ತಿಳಿಸಿದರು.

ಬೆಂಗಳೂರಿನಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಾವೇರಿ ಜಿಲ್ಲೆಯ ಹಾಲು ಉತ್ಪಾದಕರ ಬಹುದಿನಗಳ ಈ ಬೇಡಿಕೆಗೆ ಅನುಮೋದನೆ ದೊರೆಯಿತು ಎಂದು ಅವರು ತಿಳಿಸಿದರು.

ಧಾರವಾಡ ಹಾಲು ಒಕ್ಕೂಟ ಮಹಾಮಂಡಳಿ ವ್ಯಾಪ್ತಿಯಲ್ಲಿ ನಾಲ್ಕು ಜಿಲ್ಲೆಗಳು ಬರುತ್ತವೆ. ಈ ಜಿಲ್ಲೆಗಳಲ್ಲಿ ಒಟ್ಟು 45000 ಹಾಲು ಉತ್ಪಾದಕ ಸದಸ್ಯರಿದ್ದಾರೆ. ಆದರೆ ಹಾವೇರಿ ಜಿಲ್ಲೆಯಲ್ಲಿ 22000 ಹಾಲು ಉತ್ಪಾದಕರಿದ್ದಾರೆ. ಜಿಲ್ಲೆಯಲ್ಲಿ ಪ್ರತಿ ದಿನ ಒಂದು ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ.

ಮುಂದಿನ ಐದು ವರ್ಷಗಳಲ್ಲಿ ಹಾಲು ಉತ್ಪಾದನೆ ಪ್ರಮಾಣ ಶೇಕಡ 20ರಷ್ಟು ವೃದ್ಧಿಯಾಗುವ ನಿರೀಕ್ಷೆ ಇದೆ. ಆದ್ದರಿಂದ ಹಾವೇರಿಯಲ್ಲಿ 1 ಲಕ್ಷ ಲೀಟರ್ ಸಾಮರ್ಥ್ಯದ ಹಾಲು ಸಂಸ್ಕರಣಾ ಡೇರಿ ಹಾಗೂ ಅಲ್ಟ್ರಾ ಹೀಟ್ ಟ್ರೀಟ್ಮೆಂಟ್ ಪ್ಯಾಕಿಂಗ್ ಘಟಕದ ಯೋಜನೆ ಸಿದ್ಧಪಡಿಸಲಾಗಿತ್ತು. ಈ ಮಹತ್ವಾಕಾಂಕ್ಷಿ ಯೋಜನೆಗೆ ಸಚಿವ ಇಂದು ಅನುಮತಿ ದೊರೆತಿದೆ ಎಂದು ಬಸವರಾಜ್ ಬೊಮ್ಮಾಯಿ ಹರ್ಷ ವ್ಯಕ್ತಪಡಿಸಿದರು.

Girl in a jacket
error: Content is protected !!