ನವದೆಹಲಿ,ಮೇ,೨೮: ಕಳೆದ ೨೪ ಗಂಟೆಯಲ್ಲಿ ಭಾರತದಲ್ಲಿ ೧,೮೬,೩೬೪ ಹೊಸ ಕೊರೊನಾ ಸೋಂಕಿತರು ಪತ್ತೆಯಾಗಿದ್ದು ೩,೮೪೭ ಜನ ಸಾವನ್ನಪ್ಪಿದ್ದಾರೆ ಇದರೊಂದಿಗೆ ಕಳೆದ ಎರಡು ದಿನಗಳಲ್ಲಿ ಕೊರೊನಾ ಪ್ರಕರಣ ಸಂಖ್ಯೆ ಇಳಿಮುಖ ಕಂಡಿದೆ
ಒಂದೇ ದಿನ ೧,೮೬,೩೬೪ ಮಂದಿಯಲ್ಲಿ ಸೋಂಕು ಪತ್ತೆಯಾಗುವುದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ ೨,೭೫,೫೫,೪೫೭ಕ್ಕೆ ತಲುಪಿದೆ.
ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ೨೩,೪೩,೧೫೨ಕ್ಕೆ ಏರಿಕೆಯಾಗಿದೆ.
ಇನ್ನು ಇದೇ ಅವಧಿಯಲ್ಲಿ ೩,೮೪೭ ಮಂದಿ ಸೋಂಕಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ ೩,೧೮,೮೯೫ಕ್ಕೆ ಏರಿಕೆಯಾಗಿದೆ.ಈ ನಡುವೆ ಕಳೆದ ೨೪ ಗಂಟೆಗಳಲ್ಲಿ ೨,೫೯,೪೫೯ ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ ೨,೪೮,೯೩,೪೧೦ಕ್ಕೆ ತಲುಪಿದೆ.
ಭಾರತದಲ್ಲಿ ಜನವರಿ ೧೬ ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ ೪೫ ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.೧ರಿಂದ ೧೮-೪೫ ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.
ಭಾರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖ
Share