ಕೋವಿಡ್ ನಿಯಂತ್ರಣಕ್ಕೆ ಶ್ರಮಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

Share

ತುಮಕೂರು, ಮೇ೨೮: ಜಿಲ್ಲೆಯಯಲ್ಲಿ ಎರಡನೇ ಹಂತದ ಕೊರೊನಾ ವೈರಸ್ ಸೋಂಕು ತಡೆಗಟ್ಟಲು ಕಠಿಣ ಕ್ರಮ ಕೈಗೊಳ್ಳಬೇಕು ಅಧಿಕಾರಿಗಳು ಬೇಜವಾಬ್ದಾರಿಯಾಗಿ ವರ್ತಿಸಬಾರದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಆದೇಶಿಸಿದ್ದಾರೆ.
ಇಲ್ಲಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಸಮಾಲೋಚನೆ ಸಭೆ ನಡೆಸಿ,ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದರು ನಂಚರ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು ಗ್ರಾಮೀಣ ಪ್ರದೇಶಗಳಲ್ಲಿ ಸೋಂಕು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಖಡಕ್ ಎಚ್ಚರಿಕೆ ನೀಡಿದರು.
ಇದೆ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ ಸಿ ಮಾಧುಸ್ವಾಮಿ,ಉಪ ಮುಖ್ಯಮಂತ್ರಿ ಗಳಾದ ಅಶ್ವಥ್ ನಾರಾಯಣ್, ಸಂಸದರಾದ ಜಿ ಎಸ್ ಬಸವರಾಜು, ಶಾಸಕರಾದ ಮಸಾಲೆ ಜಯರಾಂ, ತುಮಕೂರು ನಗರದ ಶಾಸಕರಾದ ಜ್ಯೋತಿ ಗಣೇಶ್,ಬಿ ಸಿ ನಾಗೇಶ್,. ಮಧುಗಿರಿ ಶಾಸಕರಾದ ವೀರಭದ್ರಪ್ಪ, ವಿಧಾನ ಪರಿಷತ್ ಸದಸ್ಯ ರಾದ ಕಾಂತರಾಜ್ , ತಿಪ್ಪೇಸ್ವಾಮಿ, ಸೇರಿದಂತೆ ಇತರರು ಉಪಸ್ಥಿತರಿದ್ದರು.

ಮಾಧ್ಯಮದವರಿಗೆ ಅವಕಾಶ ಇಲ್ಲ
ಮಾಧ್ಯಮದವರು ದಯವಿಟ್ಟು ಹೊರಗೆ ಹೋಗಿ ಆಮೇಲೆ ಮುಖ್ಯಮಂತ್ರಿಗಳು ನಿಮ್ಮ ಜೊತೆ ಮಾತನಾಡುತ್ತಾರೆ ಎಂದು ಫೋಲಿಸರ ಮೂಲಕ ಹೊರಗೆ ಕಳುಹಿಸಿದ ಪ್ರಸಂಗ ನಡೆಯಿತು.

Girl in a jacket
error: Content is protected !!