ಬೆಂಗಳೂರು,ಮೇ,29: ಮಹಾಮಾರಿ ಕೊರೊನಾ ಸೋಂಕಿನಿಂದ ಹೆತ್ತವರನ್ನು ಕಳೆದುಕೊಂಡ ಮಕ್ಕಳಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಆರ್ಥಿಕ ನೆರವಿನ ಸಹಾಯ ಹಸ್ತ ಚಾಚಿರುವ ಪ್ರಧಾನಿ ಹಾಗೂ ಸಿಎಂಗೆ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಸ್ವಾಗತಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಕೊರೊನಾ ಸೋಂಕಿನಿಂದ ಬಹಳಷ್ಟು ಮಕ್ಕಳು ತಂದೆ ತಾಯಿಗಳನ್ನು ಕಳೆದುಕೊಂಡಿದ್ದಾರೆ. ಕೆಲವು ಮಕ್ಕಳಿಗೆ ಪೋಷಕರೂ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಅಂತಹ ಮಕ್ಕಳನ್ನು ನಮ್ಮ ಇಲಾಖೆ ಗುರುತಿಸಿ ಅವರಿಗೆ ನೆರವು ನೀಡಲು ಈಗಾಗಲೇ ತೀರ್ಮಾನ ಮಾಡಲಾಗಿದೆ.
ಕೊರೊನಾ ಸಂಕಷ್ಟದಿಂದ ತಂದೆ ತಾಯಿಗಳನ್ನು ಕಳೆದುಕೊಂಡು ಅನಾಥರಾಗಿರುವ ಮಕ್ಕಳ ಭವಿಷ್ಯದ ದೃಷ್ಠಿಯಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯದಲ್ಲಿ ಮುಖ್ಯಮಂತ್ರಿ ಬಾಲ ಸೇವಾ ಯೋಜನೆ ಮೂಲಕ ಪ್ರತಿ ತಿಂಗಳು 3500 ರೂ. ಸಹಾಯ ಧನ ನೀಡುವ ಮೂಲಕ ಅನಾಥ ಮಕ್ಕಳ ಬಾಳಿಗೆ ಆಶಾಕಿರಣವಾಗಿ ಹೊಮ್ಮಿದ್ದಾರೆ.
ಸಂಕಷ್ಟದ ಸಂದರ್ಭದಲ್ಲಿ ಅನಾಥ ಮಕ್ಕಳ ನೆರವಿಗೆ ಧಾವಿಸಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ತುಂಬು ಹೃದಯದ ಧನ್ಯವಾದಗಳನ್ನು ಅರ್ಪಿಸುತ್ತೇನೆ.
ಅಲ್ಲದೇ, ಕೊರೊನಾ ಸೋಂಕಿನಿಂದ ತಂದೆ ತಾಯಿಗಳನ್ನು ಕಳೆದುಕೊಂಡ ಮಕ್ಕಳನ್ನು ಇಲಾಖೆ ಗುರುತಿಸುವ ಕೆಲಸ ಮಾಡುತ್ತಿದ್ದು, ಅಂತಹ ಮಕ್ಕಳಿಗೆ ಮುಖ್ಯಮಂತ್ರಿಗಳು ಘೋಷಣೆ ಮಾಡಿರುವ ಯೋಜನೆಯನ್ನು ಪ್ರಾಾಮಾಣಿಕವಾಗಿ ತಲುಪಿಸುವ ಕೆಲಸವನ್ನು ನಮ್ಮ ಇಲಾಖೆ ಮೂಲಕ ಮಾಡಲಾಗುವುದು ಎಂದು ಅವರು ತಿಳಿದಿದ್ದಾರೆ.