ರಾಜ್ಯದಲ್ಲೂ ದ್ವತೀಯ ಪಿಯುಸಿ ಪರೀಕ್ಷೆ ರದ್ದು-ಸುರೇಶ್ ಕುಮಾರ್

Share

ಬೆಂಗಳೂರು, ಜೂ,04: ಕೋವಡ್ ತೀವ್ರಗತಿಯಲ್ಲಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಪರೀಕ್ಷೆ ರದ್ದು ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಘೋಷಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಛಿ ನಡೆಸಿ ಮಾತನಾಡಿದ ಅವರು, ರಾಜ್ಯದ ಶಿಕ್ಷಣ ತಜ್ಞರು, ಸಚಿವರು, ಹಿರಿಯ ಪತ್ರಕರ್ತರು, ಪೋಷಕರು ಹಾಗೂ ವಿದ್ಯಾರ್ಥಿಗಳ ಅಭಿಪ್ರಾಯವನ್ನು ಸಂಗ್ರಹಿಸಲಾಗಿದೆ ಎಂದು ತಿಳಿಸಿದರು. ಕೊರೊನಾವೈರಸ್ ಹಾವಳಿ ನಡುವೆ ಪರೀಕ್ಷೆ ನಡೆಸಬೇಕೋ ಬೇಡವೋ ಎಂಬ ಬಗ್ಗೆ ಅಭಿಪ್ರಾಯ ಸಂಗ್ರಹಿಸಲಾಗಿದೆ.

ರಾಜ್ಯದಲ್ಲಿ ಒಂದು ವರ್ಗವು ಪರೀಕ್ಷೆ ಬೇಡ ಎನ್ನುತ್ತಿದ್ದರೆ, ಇನ್ನೊಂದು ವರ್ಗವು ಪರೀಕ್ಷೆ ನಡೆಸಬೇಕು ಎನ್ನುತ್ತಿದೆ. ಪ್ರತಿಯೊಂದು ನಿರ್ಧಾರದ ಬಗ್ಗೆ ಪರ-ವಿರೋಧಗಳು ವ್ಯಕ್ತವಾಗುವುದು ಸರ್ವೇ ಸಾಮಾನ್ಯವಾಗಿದೆ. ವಿದ್ಯಾರ್ಥಿಗಳ ಆರೋಗ್ಯ ಮತ್ತು ಶೈಕ್ಷಣಿಕ ಭವಿಷ್ಯವನ್ನು ಗಮನದಲ್ಲಿ ಇಟ್ಟುಕೊಂಡು ನಿರ್ಧಾರ ತೆಗೆದುಕೊಳ್ಳಲಾಗ
ರಾಜ್ಯದ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಗೊಳಿಸುವ ನಿರ್ಧಾರದಿಂದ ಕುಗ್ಗಬಾರದು. ಐಐಟಿ ವ್ಯಾಸಂಗ ಮಾಡುವ ಗುರಿಯನ್ನು ಹೊಂದಿದ್ದೀರಿ. ಆದರೆ ಪ್ರಸ್ತುತ ಪರಿಸ್ಥಿತಿಯಲ್ಲಿ ಪರೀಕ್ಷೆಗಳನ್ನು ನಡೆಸುವುದು ಸೂಕ್ತವಲ್ಲ.

ವಿಜ್ಞಾನ, ಕಲೆ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವುದಕ್ಕೆ ಕನಿಷ್ಠ 12 ದಿನಗಳೇ ಬೇಕಾಗಿರುತ್ತದೆ. ಕೊವಿಡ್-19 ಸಂದಿಗ್ಧ ಸ್ಥಿತಿಯಲ್ಲಿ ಪರೀಕ್ಷೆಗಳನ್ನು ನಡೆಸುವ ತೊಂದರೆ ತೆಗೆದುಕೊಳ್ಳುವುದಿಲ್ಲ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

Girl in a jacket
error: Content is protected !!