ನವದೆಹಲಿ, ಜೂ 08:ದೇಶದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಪ್ರಕರಣಗಳು ಇಳಿಕೆಯಾಗುತ್ತಿದ್ದು ಕಳೆದ 24 ಗಂಟೆಯಲ್ಲಿ 86,498 ಮಂದಿ ಸೋಂಕಿತರು ಪತ್ತೆಯಾಗಿದ್ದಾರೆ.
ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,89,96,473ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 2123 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ.
ಕಳೆದ 24 ಗಂಟೆಯಲ್ಲಿ 1,82,282 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ದೇಶದಲ್ಲಿ ಈವರೆಗೆ 23,61,98,726 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.