11 ಜಿಲ್ಲೆಗಳಲ್ಲಿ ಲಾಕ್ ಡೌನ್ ವಿಸ್ತರಣೆ

Share

ಬೆಂಗಳೂರು, ಜೂ,10:ತಜ್ಞರ ನೀಡಿರುವ ಸಲಹೆ ಮೇರೆಗೆ ಕೊರೊನಾ ಸೋಂಕು ಹೆಚ್ಚಿರುವ 12 ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದು ವರೆಲು ನಿರ್ಧರಿಸಾಗಿದೆ.

ಈಗಿರುವ ನಿರ್ಭಂಧಗಳಲ್ಲಿ ಕೆಲವು ಮಾರ್ಪಾಡುಗಳನ್ನು ಸಡಿಲಿಕೆಗಳನ್ನು ಮಾಡಲು ಇಂದಿನ ಸಭೆಯಲ್ಲಿ ನಿರ್ಧರಿಸಲಾಗಿದೆ .

ಸಿಎಂ ಯಡಿಯೂರಪ್ಪ ಸಭೆ ನಂತರ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದರು,ಕೊರೊನಾ ವೈರಸ್ ಪಾಸಿಟಿವಿಟಿ ಹೆಚ್ಚಾಗಿರುವ 11 ಜಿಲ್ಲೆಗಳಲ್ಲಿ ಕಠಿಣ ಲಾಕ್‌ಡೌನ್ ವಿಸ್ತರಣೆ ಮಾಡುವುದಾಗಿ ಹೇಳಿದ್ದಾರೆ.

ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಹಾಸನ, ಮಂಡ್ಯ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಕೊಡಗು, ಚಾಮರಾಜನಗರ, ಮೈಸೂರು, ದಕ್ಷಿಣ ಕನ್ನಡ ಲಾಕ್‌ಡೌನ್ ನಿಯಮ ಯಥಾಸ್ಥಿತಿ ಮುಂದುವರೆಯಲಿದೆ ಎಂದು ಸಿಎಂ ತಿಳಿಸಿದರು.

ಲಾಕ್‌ಡೌನ್ ಮುಂದುವರೆಯುವ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಉಸ್ತುವಾರಿ ಸಚಿವರುಗಳೊಂದಿಗೆ ಸಮಾಲೋಚಿಸಿ ಇನ್ನೂ ಹೆಚ್ಚಿನ ಕಠಿಣ ಕ್ರಮಗಳನ್ನು ಕೈಗೊಳ್ಳಲು ಅಧಿಕಾರ ನೀಡಲಾಗಿದೆ ಎಂದಿದ್ದಾರೆ.

Girl in a jacket
error: Content is protected !!