ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಇಳಿಕೆ

Share

ನವದೆಹಲಿ, ಜೂ, ೧೧: ಕೊರೊನಾ ವೈರಸ್ ಭಾರತದಲ್ಲಿ ದಿನೇ ದಿನೇ ಕಡಿಮೆಗೊಳ್ಳುತ್ತಿದೆ ಕಳೆದ ೨೪ ಗಂಟೆಯಲ್ಲಿ ಅದರ ಸಂಖ್ಯೆ ಮತ್ತಷ್ಟು ಇಳಿಮುಖವಾಗಿದ್ದು ಸದ್ಯ ನಿಟ್ಟುಸಿರು ಬಿಡುವಂತಾಗಿದೆ. ಕಳೆದ ೨೪ ಗಂಟೆಯಲ್ಲಿ ೬,೧೦೦ಕ್ಕೂ ಹೆಚ್ಚಾಗಿದ್ದ ಸಾವಿನ ಸಂಖ್ಯೆ ೩,೪೦೩ಕ್ಕೆ ತಗ್ಗಿದೆ.
ಒಂದೇ ದಿನ ೯೧,೭೦೨ ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ ೧,೩೪,೫೮೦ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಭಾರತದಲ್ಲಿ ಒಟ್ಟು ೨,೯೨,೭೪,೮೨೩ ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಇದುವರೆಗೂ೨,೭೭,೯೦,೦೭೩ ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಯಿಂದ ಒಟ್ಟು ೩,೬೩,೦೭೯ ಜನರು ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ ೧೧,೨೧,೬೭೧ ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ ೨೪.೨೪ ಕೋಟಿ ಜನರಿಗೆ ಕೊರೊನಾವೈರಸ್ ಲಸಿಕೆ
ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಹಾಗೂ ಆಸ್ಟ್ರಾಜೆನಿಕಾ ಸಂಶೋಧಿಸಿದ ಸೀರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸುತ್ತಿರುವ ಕೊವಿಶೀಲ್ಡ್ ಹಾಗೂ ಭಾರತ್ ಬಯೋಟೆಕ್ ಸಂಸ್ಥೆಯು ಹೈದ್ರಾಬಾದ್ ನಲ್ಲಿ ಉತ್ಪಾದಿಸುತ್ತಿರುವ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸುವುದಕ್ಕೆ ಭಾರತದಲ್ಲಿ ಅನುಮೋದನೆ ನೀಡಲಾಗಿದೆ. ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ ೧೪೬ ದಿನಗಳಲ್ಲಿ೨೪,೬೦,೮೫,೬೪೯ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

Girl in a jacket
error: Content is protected !!