ನವದೆಹಲಿ,ಜೂ,೧೧: ಪೆಟ್ರೋಲ್ ಬೆಲೆ ಏರಿಕೆಯನ್ನು ಖಂಡಿಸಿ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿರುವ ಈ ಸಂದರ್ಭದಲ್ಲೂ ಮತ್ತೇ ಇಮದು ತೈಲ ಬೆಲೆ ಏರಿಕೆಯಾಗಿದೆ.
ಪೆಟ್ರೋಲ್ ದರ ೨೯ ಪೈಸೆ ಮತ್ತು ಡೀಸೆಲ್ ದರ ೨೯ ಪೈಸೆ ಏರಿಕೆ ಮಾಡಿವೆ.
ಸರ್ಕಾರಿ ಸ್ವಾಮ್ಯದ ತೈಲ ಸಂಸ್ಕರಣಾ ಕಂಪನಿಗಳು (ಒಎಂಸಿ) ಶುಕ್ರವಾರ ದೇಶಾದ್ಯಂತ ಇಂಧನ ದರವನ್ನು ಮತ್ತೊಮ್ಮೆ ಹೆಚ್ಚಿಸಿದ್ದು, ಈ ಮೂಲಕ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೊಸ ದಾಖಲೆಯ ಗರಿಷ್ಠ ಮಟ್ಟಕ್ಕೆ ತಲುಪಿದೆ.
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಮೂಲಗಳ ಪ್ರಕಾರ ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ ೨೯ ಪೈಸೆ ಮತ್ತು ಡೀಸೆಲ್ ದರ ೨೯ ಪೈಸೆ ಏರಿಕೆಯಾಗಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ ೯೯.೧೧ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ ೯೨.೦೩ರೂ ಗೆ ಏರಿಕೆಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ ೯೫.೯೧ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ ೮೬.೮೧ರೂ ಗೆ ಏರಿಕೆಯಾಗಿದೆ.
ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ ೧೦೨.೧ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ ೯೪.೨ರೂ ಗೆ ಏರಿಕೆಯಾಗಿದೆ. ಕೋಲ್ಕತಾದಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ ೯೫.೮೬ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ ೮೯.೬೫ರೂ ಗೆ ಏರಿಕೆಯಾಗಿದೆ. ಚೆನ್ನೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ ೯೭.೨೪ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ ೯೧.೪೭ ರೂ ಗೆ ಏರಿಕೆಯಾಗಿದೆ.