ಶಿಕಾರಿಪುರ,ಜೂ,೧೨: ತೈಲಬೆಲೆ ಏರಿಕೆ ಖಂಡಿಸಿ ಶಿಕಾರಿಪುರ ಬ್ಲಾಕ್ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಿತು.
ಕೇಂದ್ರ ಸರ್ಕಾರದ ಬೆಲೆ ಏರಿಕೆ ರಾಜ್ಯ ಸರ್ಕಾರದ ವಿದ್ಯುತ್ ಬೆಲೆ ಏರಿಕೆಯನ್ನು ಖಂಡಿಸಿ ನಡೆಸಿದ ಈ ಬೃಹತ್ ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಣಿ ಮಾಲತೇಶ್,ಉಪಾಧ್ಯಕ್ಷ ಎಂ.ಅರುಣ್ ಕುಮಾರ್,ಜಿಲ್ಲಾ ಕಾರ್ಯದರ್ಶಿ ಬಂಡಾರಿ ಮಾಲತೇಶ್ ಪುರಸಭೆ ಸದಸ್ಯ ಗೋಣಿ ಪ್ರಕಾಶ್ ಖಚಾಂಜಿ ಮಂಜುನಾಥ್ ರಆವ್ ಸೇರಿದಂತೆ ವಿವಿಧ ಪದಾಧಿಕಾರಿಗಳು ಕಾರ್ಯಕರ್ತರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿಜೆಪಿ ಸರ್ಕಾರ ನಿರಂತರವಾಗಿ ಬೆಲೆ ಏರಿಕೆ ಮಾಡುತ್ತಲೇ ಇದೆ ಇದರಿಂದ ಮಧ್ಯಮ ಮತ್ತು ಬಡ ವರ್ಗದ ಜನರ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ವ್ಯಾಕ್ಸಿನ್ ಸಮರ್ಪಕವಾಗಿ ಒದಗಿಸಲಾಗದೆ ಇರುವ ಇಂತ ಪರಿಸ್ಥಿತಿಯಲ್ಲಿ ಅಧಿಕಾರಕ್ಕಾಗಿ ಬಿಜೆಪಿ ನಾಯಕರು ಕಿತ್ತಾಟ ನಡೆಸುತ್ತಿದ್ದಾರೆ ಅಧಿಕಾರ ಉಳಿಸಿಕೊಳ್ಳಲು ಪದೆ ಪದೇ ದೆಹಲಿಗೆ ಹೋಗುತ್ತಿದ್ದಾರೆ. ಪ್ರತಿನಿತ್ಯ ಅಧಿಕಾರಕ್ಕಾಗಿ ಕಚ್ಚಾಟ ನಡೆಸುವ ಮೂಲಕ ಆಡಳಿತ ವೈಫಲ್ಯವಾಗಿದೆ ಎಂದು ಅವರು ಆರೋಪಿಸಿದರು
ಶಿಕಾರಿಪುರ:ತೈಲಬೆಲೆ ಏರಿಕೆ ಖಂಡಿಸಿ ಬೃಹತ್ ಪ್ರತಿಭಟನೆ
Share